6:07 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೊಟ್ಟೆ ಹಗರಣ ಆರೋಪಕ್ಕೆ ಸಿಲುಕಿರುವ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ!: ಓಡೋಡಿ ಬಂದು ಪ್ರಮಾಣ ವಚನ ಸ್ವೀಕಾರ !!

04/08/2021, 23:03

ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ಪೂರೈಕೆ ಟೆಂಡರ್ ಅವ್ಯವಹಾರ ಆರೋಪಕ್ಕೆ ಸಿಲುಕಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಕೊನೆಯ ಕ್ಷಣದಲ್ಲಿ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಜೊಲ್ಲೆ ಅವರನ್ನು ಜೀರೋ ಟ್ರಾಫಿಕ್ ನಲ್ಲಿ ರಾಜಭವನಕ್ಕೆ ಕರೆದು ತಂದು ಪ್ರಮಾಣ ವಚನ ಸ್ವೀಕರಿಸಲು ಅನುವು ಮಾಡಿಕೊಡಲಾಯಿತು.

ಮೊಟ್ಟೆ ಹಗರಣದಲ್ಲಿ ಸಿಲುಕಿಕೊಂಡಿರುವ ಜೊಲ್ಲೆ ಅವರಿಗೆ ಸಚಿವ ಸ್ಥಾನ ಕೈತಪ್ಪುವ ಎಲ್ಲ ಸಾಧ್ಯತೆಗಳಿತ್ತು. ಈ ಹಿನ್ನೆಲೆಯಲ್ಲಿ ಜೊಲ್ಲೆ ಅವರು ಪಕ್ಷದ ವರಿಷ್ಠರ ಮನವೊಲಿಸಲು ತನ್ನ ಪತಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ದಿಲ್ಲಿಗೆ ತೆರಳಿದ್ದರು. ದಿಲ್ಲಿಯಿಂದ ಹಿಂತಿರುಗುವಾಗ ಕೊಂಚ ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭವನ್ನು ಕೂಡ ಕೊಂಚ ವಿಳಂಬ ಮಾಡಲಾಗಿತ್ತು ಎನ್ನಲಾಗಿದೆ. ಆದರೂ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಿತ್ತು.

ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ  ಪತಿ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ಆಗಮಿಸಿದ ಶಶಿಕಲಾ ಜೊಲ್ಲೆ ಅವರನ್ನು ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಝಿರೋ ಟ್ರಾಫಿಕ್‍ನಲ್ಲಿ ರಾಜಭವನಕ್ಕೆ ಕರೆದು ತರಲಾಯಿತು. ಜೊಲ್ಲೆ ಅವರು ಕೊನೆಗೂ ಓಡೋಡಿ ಬಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು