9:36 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೂಡಿಗೆರೆ ಸಮೀಪ ಸರಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಮಂದಿಗೆ ಗಾಯ

10/12/2023, 15:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬಸ್ಸುಗಳ ಅಪಘಾತಕ್ಕೆ ಎರಡೂ ಬಸ್ಸಿನ ಚಾಲಕರ ಬೇವಾಬ್ದಾರಿ ಹಾಗೂ ಅತಿ ವೇಗವಾಗಿ ಬಸ್ಸನ್ನ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಅಪಘಾತದಿಂದ ಎರಡು ಬಸ್ಸಿನ ಚಾಲಕರಿಗೆ ತುಸು ಹೆಚ್ಚಾಗಿ ಗಾಯವಾಗಿದೆ. ಏಕೆಂದರೆ ಬಸ್ಸುಗಳು, ಮುಖಾಮುಖಿ ಡಿಕ್ಕಿ ಆದ ಸಂದರ್ಭದಲ್ಲಿ ಕೂಡ ಎರಡು ಬಸ್ಸಿನ ಡ್ರೈವರ್ ಸೀಟಿನ ಭಾಗ ಸಂಪೂರ್ಣ ನಜ್ಜುಗೊಜ್ಜಾಗಿದೆ. ಹಾಗಾಗಿ, ಎರಡು ಬಸ್ಸಿನ ಚಾಲಕರಿಗೂ ತುಸು ಹೆಚ್ಚಾಗಿ ಗಾಯವಾಗಿದೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು 5 ಆಂಬುಲೆನ್ಸ್ ಗಳಲ್ಲಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲ್ಲೂಕು ಬಹುತೇಕ ಮಲೆನಾಡು ಭಾಗದಿಂದ ಕೂಡಿದೆ. ಇಲ್ಲಿ ಹಾವು ಬಳಕಿನ ಮೈ ಕಟ್ಟಿನ ರಸ್ತೆಯೇ ಹೆಚ್ಚು. ಹಾಗಾಗಿ, ವಾಹನಗಳ ಚಾಲಕರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸಬೇಕು. ಇಲ್ಲವಾದರೆ ಅಪಘಾತ ಕಟ್ಟಿಟ್ಟ ಬುತ್ತಿ. ಹಾವು ಬಳುಕಿನ ಮೈಕಟ್ಟಿನ ರಸ್ತೆ ಆಗಿರುವುದರಿಂದ ಮೂಡಿಗೆರೆ ತಾಲೂಕಿನ ಅಲ್ಲಲ್ಲೇ ಸಾಕಷ್ಟು ಅಪಘಾತಗಳು ಕೂಡ ಸಂಭವಿಸುತ್ತಿವೆ. ಆದರೆ, ತರಬೇತಿ ಪಡೆದ ಸರ್ಕಾರಿ ಬಸ್ಸಿನ ಚಾಲಕರು ವೇಗವಾಗಿ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿರುವುದಕ್ಕೆ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು