1:18 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನಿಂದ ಮತ್ತೆ ಹಳೆ ಮುಖವನ್ನೇ ತೋರಿಸಿ ಗೆಲ್ಲುವ ಪ್ರಯತ್ನ: ಆದರೆ, ಕೈಗೆ ಬೇಕಿದೆ ಹೊಸ, ಫ್ರೆಶ್ ಮುಖ

11/12/2023, 12:54

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದಿದೆ. ಫಲಿತಾಂಶವೂ ಬಂದಿದೆ. ಗೆಲುವಿನ ಪರಾಮರ್ಶೆ, ಸೋಲಿನ ಅತ್ಮಾವಲೋಕನ ನಡೆದಿದೆ. ಇದೀಗ ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿವೆ. ಕರಾವಳಿಯ ಪ್ರತಿಷ್ಠಿತ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೆಸರು ಅಂತಿಮಗೊಂಡಿದೆ. ಇನ್ನು ಕಾಂಗ್ರೆಸ್ ನಿಂದ ಅಭ್ಯರ್ಥಿ ಹುಡುಕಾಟ ಮುಂದುವರಿದಿದೆ.
ದ.ಕ. ಜಿಲ್ಲೆಯ ಚುನಾವಣಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಈಗಾಗಲೇ ಸಭೆ ನಡೆಸಿದ್ದಾರೆ. ಪಕ್ಷದ ನಾಯಕರ, ಮುಖಂಡರ, ಬ್ಲಾಕ್ ಮಟ್ಟದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಮಾಜಿ ಸಚಿವ ಬಿ. ರಮಾನಾಥ ರೈ, ಇನಾಯತ್ ಆಲಿ, ರಕ್ಷಿತ್ ಶಿವರಾಮ್, ಮಮತಾ ಗಟ್ಟಿ, ಪದ್ಮರಾಜ್ ಆರ್., ಹರೀಶ್ ಕುಮಾರ್, ಮಂಜುನಾಥ ಭಂಡಾರಿ ಮುಂತಾದವರ ಹೆಸರು ತೇಲಿ ಬಂದಿದೆ. ಎಷ್ಟು ಬಾರಿ ಅಭಿಪ್ರಾಯ ಕೇಳಿದರೂ ಕೊನೆಗೆ ಹೈಕಮಾಂಡ್ ಟಿಕೆಟ್ ಕೊಡುವುದು ತನಗೆ ಬೇಕಾದವರಿಗೆ ಮಾತ್ರ ಎಂದು ಅಬಿಪ್ರಾಯ ಮಂಡಿಸಲು ಬಂದ ಕೆಲವು ಪದಾಧಿಕಾರಿಗಳೇ ಹೇಳಿದ್ದಾರೆ.
ಪಕ್ಷ ಹಾಗೂ ಗಾಂಧಿ ಕುಟುಂಬದ ಬಗ್ಗೆ ನಿಷ್ಠೆ, ಜಾತ್ಯತೀತ ನಿಲುವಿಗೆ ಬದ್ದತೆ ಹಾಗೂ ನಂಬಿಕೊಂಡು ಬಂದ ಸಿದ್ಧಾಂತ ಜತೆಗೆ ಎಂದೂ ರಾಜಿ ಮಾಡಿಕೊಳ್ಳದ ರಮಾನಾಥ ರೈ ಅವರ ಬಗ್ಗೆ ಕೆಪಿಸಿಸಿ ಒಲವು ಹೊಂದಿದೆ ಎನ್ನಲಾಗಿದೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸ್ವತಃ ರೈ ಅವರೇ ಘೋಷಿಸಿದರೂ ಜಿಲ್ಲೆಯಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ರಮಾನಾಥ ರೈ ಅವರ ಅಗತ್ಯವಿದೆ ಎಂಬ ಕೂಗೂ ಕೇಳಿ ಬರುತ್ತಿದೆ. ಆದರೆ ಎರಡು ಬಾರಿ ಸತತವಾಗಿ ಬಂಟ್ವಾಳ ವಿಧಾನಸಭೆ ಕ್ಷೇತ್ರದಲ್ಲಿ ಸೋತ ರೈ ಅವರಿಗೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುವ ಸಂಸತ್ ಕ್ಷೇತ್ರದಲ್ಲಿ ಗೆಲ್ಲಲ್ಲು ಸಾಧ್ಯವೇ ಎಂಬ ವಾದವೂ ಇದೆ.
ಇನ್ನು ಟಿಕೆಟ್ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಒಲವು ಹೊಂದಿದ್ದಾರೆ ಎಂಬ ಮಾಹಿತಿಯೂ ಇದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಲ್ಲವ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. ಬಿಲ್ಲವರಿಗೆ ಟಿಕೆಟ್ ಕೊಡಬೇಕು ಎನ್ನುವ ಹಕ್ಕೊತ್ತಾಯವೂ ಕೇಳಿ ಬರುತ್ತಿದೆ. ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರು ಬಿಲ್ಲವ ಸಮುದಾಯಕ್ಕೆ ಸೇರಿದವರಾದರೂ ಶತತ ಸೋಲು ಅನುಭವಿಸಿದ್ದಾರೆ. ಪೂಜಾರಿ ಅವರನ್ನು ಗೆಲ್ಲಿಸುವ ಪ್ರಯತ್ನವನ್ನು ಬಿಲ್ಲವ ಸಮುದಾಯದವರು ಮಾಡಿಲ್ಲ ಎಂಬ ವಾದವೂ ಕಾಂಗ್ರೆಸ್ ಪಕ್ಷದೊಳಗೆ ಕೇಳಿ ಬರುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಯುವ ನ್ಯಾಯವಾದಿ, ಪ್ರಸ್ತುತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಪದ್ಮರಾಜ್ ಆರ್. ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆಯನ್ನು ಕೂಡ ಕಾಂಗ್ರೆಸ್ ಹೈಕಮಾಂಡ್ ನೀಡಿತ್ತು ಎಂಬ ಮಾಹಿತಿ ಇದೆ. ಅಂದು ಪದ್ಮರಾಜ್ ಅವರನ್ನು ದೆಹಲಿಗೆ ಕರೆಸಿದ್ದ ಪಕ್ಷದ ವರಿಷ್ಠರು ಅಲ್ಲಿನ ಪ್ರತಿಷ್ಠಿತ ಹೊಟೇಲ್ಲೊಂದರಲ್ಲಿ ಮಾತುಕತೆ ನಡೆಸಿ ಭರವಸೆ ನೀಡಿತ್ತು ಎನ್ನಲಾಗಿದೆ. ಹಾಗಾದರೆ ಪಕ್ಷ ನೀಡಿದ ಮಾತನ್ನು ಉಳಿಸಿಕೊಳ್ಳುತ್ತದೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ.
ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಸತತ ಸೋಲು ಅನುಭವಿಸುತ್ತಿರುವ ಕಾಂಗ್ರೆಸ್ ಗೆ ನಿಜವಾಗಿಯೂ
ಯಾವುದೇ ವಿವಾದವಿಲ್ಲದ ದಕ್ಷ, ಪ್ರಾಮಾಣಿಕ
ಹೊಸ ಮುಖದ ಅವಶ್ಯಕತೆ ಇದೆ. ಅದೇ ಸೋತ ಹಳೆಯ ಮುಖಗಳನ್ನು ತೋರಿಸಿದರೆ ಇನ್ನೂ ನಾಲ್ಕು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಷ್ಟ ಸಾಧ್ಯ ಎಂದು ಕಾಂಗ್ರೆಸ್ ನ ಕೆಲವು ಮುಖಂಡರೇ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು