11:25 AM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾದ ಗೃಹ ಸಚಿವ ಡಾ. ಪರಮೇಶ್ವರ್

11/12/2023, 21:25

ಬೆಳಗಾವಿ(reporterkarnataka.com): ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್​ ಅವರು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿದರು.
ಗೃಹ ಸಚಿವರು ಹಲ್ಲೆಗೊಳಗಾದ ಮಹಿಳೆಯಿಂದ ಘಟನೆ ಕುರಿತು ಮಾಹಿತಿ ಪಡೆದರು.
ಸಂತ್ರಸ್ತ ಮಹಿಳೆಯ 24ರ ಹರೆಯದ ಮಗ ಯುವತಿಯೊಬ್ಬಳ ಪ್ರೀತಿಸುತ್ತಿದ್ದು, ಇಬ್ಬರು ಜೊತೆಗೆ ಹೋಗಿದ್ದಾರೆ. ಇದರಿಂದ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಸುಮಾರು 8ರಿಂದ 10 ಮಂದಿ ಇದ್ದ ಗುಂಪು ಮಹಿಳೆಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಡಿ ಹಾಕಿದ್ದಾರೆ. ಇದೊಂದು ಅಮಾನವೀಯ ಘಟನೆ. ಪ್ರಕರಣ ಸಂಬಂಧಿಸಿದಂತೆ 7 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇನ್ನಿಬ್ಬರು ತಲೆ ಮರೆಸಿಕೊಂಡಿದ್ದಾರೆ ಎಂದು ಮಾಧ್ಯಮಗಳಿಗೆ ಗೃಹ ಸಚಿವರು ವಿವರ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು