4:57 AM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

Scanning Center | ಪಿಸಿ & ಪಿಎನ್ ಡಿಟಿ ಕಾಯ್ದೆ ಉಲ್ಲಂಘನೆ: ಕೋಲಾರ ಹೋಪ್ ಆಸ್ಪತ್ರೆಯ ಸ್ಕ್ಯಾನಿಂಗ್ ಕೇಂದ್ರ ಸೀಸ್

12/12/2023, 22:28

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕರ್ನಾಟಕ ರಾಜ್ಯಾದ್ಯಂತ ಆವರಿಸಿರುವ ಭ್ರೂಣಹತ್ಯೆ ಹಾಗೂ ಪಿಸಿ & ಪಿಎನ್ ಡಿಟಿ ಕಾಯ್ದೆ ಉಲ್ಲಂಘನೆಯ ಈ ಸಮಯದಲ್ಲಿ, ಉಲ್ಲಂಘನೆಯಾಗಿರುವ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಆರಂಭಿಸಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ಸಕ್ಷಮ ಪ್ರಾಧಿಕಾರ ಪ್ರತ್ಯಾಯೋಜಿಸಿದ ಅಧಿಕಾರದ ಮೇರೆಗೆ ಪಿ.ಸಿ.&ಪಿ.ಎನ್.ಡಿ.ಟಿ. ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಜಿಲ್ಲಾ ತಪಸಣಾ ಮತ್ತು ಮೇಲ್ವಿಚಾರಣೆ ತಂಡವು ಜಿಲ್ಲೆಯಾದ್ಯಂತ ಇರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ಪರಿಶೀಲನೆಗಾಗಿ ಭೇಟಿ ನೀಡುತ್ತಿದ್ದು .

ಅದರಂತೆ ಪಿ.ಸಿ.&ಪಿ.ಎನ್.ಡಿ.ಟಿ. ಕಾಯ್ದೆನ್ವಯ ಪರಿಶೀಲನೆಗಾಗಿ ಕೋಲಾರ ನಗರದ ಕುರುಬರಪೇಟೆಯಲ್ಲಿರುವ Hope Health Care ಗೆ ಭೇಟಿ ನೀಡಿದ್ದು, ಈ ಆರೋಗ್ಯ ಸಂಸ್ಥೆಯ ಸ್ಕ್ಯಾನಿಂಗ್ ಕೇಂದ್ರದಲ್ಲಿ ನೋಂದಾಯಿತ ವೈದ್ಯರಾದ ಡಾ. ಡೈಸಿ ಯಶವಂತ್ ಅವರು ಸ್ಕ್ಯಾನಿಂಗ್ ಕಾರ್ಯವನ್ನು ನಿರ್ವಹಿಸದೇ ಅವರ ಅನುಪಸ್ಥಿತಿಯಲ್ಲಿ ಅರ್ಹರಲ್ಲದ ಶುಕ್ರೂಷಕಿ ವಿಜಯಲಕ್ಷ್ಮಿ ಮತ್ತು ಸ್ಕ್ಯಾನಿಂಗ್ ಮಾಡಲು ಅರ್ಹರಲ್ಲದ ವೈದ್ಯರಾದ ಡಾ. ಯಶವಂತ್ ವಿಟ್ಲರವರು ಸ್ಕ್ಯಾನಿಂಗ್ ಮಾಡುತ್ತಿರುವುದು ಹಾಗೂ ದಾಖಲೆಗಳನ್ನು ನಿರ್ವಹಿಸದೇ ಇರುವುದು ಕಂಡು ಬಂದಿದ್ದು. ಈ ಕೇಂದ್ರವನ್ನು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ತಪಾಸಣೆ ಮತ್ತು ಮೇಲ್ವಿಚಾರಣ ಸಮಿತಿಯ ಅಧ್ಯಕ್ಷರಾದ ಡಾ. ಚಂದನ್ ಕುಮಾರ್.ಎಸ್. ಹಾಗೂ ಸಮಿತಿಯ ಸದಸ್ಯರುಗಳಾದ ಎಸ್.ಎನ್.ಆರ್. ಆಸ್ಪತ್ರೆಯ ರೇಡಿಯಾಲಜಿಸ್ಟ್ ಡಾ. ರವೀಂದ್ರ ನಾಯಕ್, ಡಾ. ರಾಜೇಂದ್ರ ಹಾಗೂ ಎನ್.ಜಿ.ಓ ರುದ್ರೇಶ್ ಹುನ್ಸಾಳ್, ಭೇಟಿ ನೀಡಿದ ಸಂದರ್ಭದಲ್ಲಿ ಸ್ಕ್ಯಾನಿಂಗ್ ಕೇಂದ್ರದಲ್ಲಿ ಪಿಸಿಪಿಎನ್ ಡಿಟಿ ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು,ಈ ಸ್ಕ್ಯಾನಿಂಗ್ ಕೇಂದ್ರವನ್ನು ಪಂಚರ ಸಮಕ್ಷಮದಲ್ಲಿ, ಪಂಚನಾಮೆಯೊಂದಿಗೆ ಸೀಸ್ ಮಾಡಿ ಸ್ಥಳ ನೋಟಿಸ್ ಜಾರಿ ಮಾಡಲಾಗಿರುತ್ತದೆ.


ಈ ಸಮಯದಲ್ಲಿ ವಿಷಯ ನಿರ್ವಾಹಕರಾದ ಜಯಚಂದ್ರ ಎಸ್, ಕೀರ್ತಿ ಸಿ.ವಿ., ಚೇತನ್ ಹಾಗೂ ವಾಹನ ಚಾಲಕ ಸರವಣ ಉಪಸ್ಥಿತಿಯಲ್ಲಿರುತ್ತಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು