8:03 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪ್ರೀತಿ ನಿರಾಕರಿಸಿದ ಸಹೋದ್ಯೋಗಿ ಯುವತಿಗೆ ಪಿಜ್ಜಾ ಹಟ್​​ ಮೆನೇಜರ್ ನಿಂದ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್

05/08/2021, 10:18

ಬೆಂಗಳೂರು(reporterkarnataka news): ಪ್ರೀತಿ ನಿವೇದನೆಯನ್ನು ನಿರಾಕರಿಸಿದಳು ಎಂದು ಸಿಟ್ಟುಗೊಂಡ ಮೇನೇಜರ್ ವೊಬ್ಬ ತನ್ನ ಮಹಿಳಾ ಸಹೋದ್ಯೋಗಿಯ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಬಸವನಗುಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಿಜ್ಜಾ ಹಟ್​​ ಮೆನೇಜರ್ ಹಲವು ದಿನಗಳಿಂದ​ ಸಂತ್ರಸ್ತೆಯನ್ನು ಪ್ರೀತಿ ಮಾಡುವಂತೆ ಪೀಡಿಸುತ್ತಿದ್ದ.ಯುವತಿ ಇದನ್ನು ಪ್ರತಿಬಾರಿಯೂ 

ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಮೆನೇಜರ್ ಆಕೆಯ ಮೊಬೈಲ್​ ಚೆಕ್​ ಮಾಡಿ ಕಪಾಳಕ್ಕೆ ಬಾರಿಸಿದ್ದಾನೆ. ಹೊಡೆದ ರಭಸಕ್ಕೆ ಯುವತಿ ನೆಲಕ್ಕೆ ಉರುಳಿಬಿದ್ದಿದ್ದಾಳೆ.

ಸ್ಥಳದಲ್ಲಿದ್ದ ಮತ್ತೊಬ್ಬ ಸಿಬ್ಬಂದಿ ಆಕೆಯ ಸಹಾಯಕ್ಕೆ ಮುಂದಾಗಿದ್ದಾನೆ.
ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದರೂ ನೌಕರಿ ಕಳೆದುಕೊಳ್ಳುವ ಭಯದಿಂದ ಯುವತಿ ಪೊಲೀಸರಿಗೆ ದೂರು ನೀಡಿಲ್ಲ. ಆದರೆ ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿ ಸುದ್ದಿಯಾಗುತ್ತಿದೆ. ಪೊಲೀಸರು ಸುಮೊಟೊ ಪ್ರಕರಣ ದಾಖಲಿಸುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು