11:04 PM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ನಂಜನಗೂಡು ನಗರಸಭೆ ಕಚೇರಿಯಲ್ಲಿ ಕಡತ ನಾಪತ್ತೆ ಪ್ರಕರಣ: ದ್ವಿತೀಯ ದರ್ಜೆ ಸಹಾಯಕರ ವಿರುದ್ದ ದೂರು ದಾಖಲಿಸಿದ ಕಂದಾಯ ಅಧಿಕಾರಿ

16/12/2023, 19:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಅಕ್ರಮವಾಗಿ ನಿವೇಶನಗಳಿಗೆ ಖಾತೆ ಮಾಡಿಕೊಟ್ಟ ಕಡತ ನಾಪತ್ತೆಯಾದ ಹಿನ್ನಲೆ ನಂಜನಗೂಡು ನಗರಸಭೆ ಕಂದಾಯ ಅಧಿಕಾರಿಯೊಬ್ಬರು ದ್ವಿತೀಯ ದರ್ಜೆ ಸಹಾಯಕರ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಡತದ ಸಂರಕ್ಷಣೆಯ ಜವಾಬ್ದಾರಿ ಹೊತ್ತಿರುವ ದ್ವಿತೀಯ ದರ್ಜೆ ಸಹಾಯಕ ಡಿ.ಎಂ.ನರಸಿಂಹಮೂರ್ತಿ ವಿರುದ್ದ ಕಂದಾಯ ಅಧಿಕಾರಿ ಎಸ್.ಡಿ.ವೆಂಕಟೇಶ್ ದೂರು ನೀಡಿದ್ದಾರೆ.
ನರಸಿಂಹ ಮೂರ್ತಿ ಅವರನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಕಡತ ದೊರಕಿಸಿಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ನಂಜನಗೂಡು ತಾಲೂಕು ದೇವೀರಮ್ಮನಹಳ್ಳಿ ಗ್ರಾಮದ ಸರ್ವೆ ನಂ.58,59 ರಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 3 ಎಕ್ರೆ 16 ಗುಂಟೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಬಡಾವಣೆಯ ಖಾತೆಯನ್ನ ಅಕ್ರಮವಾಗಿ KMF-24 ರ ವಹಿಯಲ್ಲಿ ನಮೂದಿಸಿದ್ದು, ಈ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ಹಾಗೂ ನೌಕರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದ್ದು, KMF-24 ಸಂಖ್ಯೆ 106 ರಲ್ಲಿ ನಮೂದಿಸಿರುವ ಅಸೆಸ್ ಮೆಂಟ್ 17115/406/1 ರಿಂದ 17115/406/48 ರವರೆಗೆ 48 ಖಾತೆಗಳನ್ನ ಅಕ್ರಮವಾಗಿ ದಾಖಲಿಸಿರುವ ಕಡತದ ನಿರ್ವಹಣೆ ಹಾಗೂ ಸಂರಕ್ಷಣೆ ಜವಾಬ್ದಾರಿ ಡಿ.ಎಂ.ನರಸಿಂಹಮೂರ್ತಿಯವರದ್ದಾಗಿದೆ. ಆದರೆ ಈ ಕಡತ ನಾಪತ್ತೆಯಾಗಿದ್ದು ಲಭ್ಯವಿಲ್ಲದ ಕಾರಣ ಡಿ.ಎಂ.ನರಸಿಂಹಮೂರ್ತಿಯವರನ್ನ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಕಡತ ದೊರಕಿಸಿಕೊಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಗರಸಭೆ ಕಂದಾಯ ಇಲಾಖೆ ಅಧಿಕಾರಿ ವೆಂಕಟೇಶ್ ದೂರು ನೀಡಿ ಒಂದು ತಿಂಗಳು ಕಳೆದರೂ ನಂಜನಗೂಡು ಪಟ್ಟಣ ಪೊಲೀಸರು ಕೂಡ ತನಿಖೆ ಮಾಡಿ ಕ್ರಮ ಕೈಗೊಳ್ಳುವುದರ ಬದಲಾಗಿ ಮೌನಕ್ಕೆ ಶರಣಾಗಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಕ್ಷೇತ್ರದ ಸರ್ಕಾರಿ ಕಚೇರಿಯಲ್ಲಿ ಕಡತ ನಾಪತ್ತೆಯಾಗಿರುವ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಲ್ಲದೆ ಈಗ ನಗರಸಭೆಯಲ್ಲಿ ಅಧ್ಯಕ್ಷರು ಇಲ್ಲದ ಕಾರಣ ಜಿಲ್ಲಾಧಿಕಾರಿಯವರೇ ಆಡಳಿತಾ ಧಿಕಾರಿಯಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಜಿಲ್ಲಾಧಿಕಾರಿಯವರು ಇದರ ಬಗ್ಗೆ ಎಚ್ಚೆತ್ತು ಭೂಗಳ್ಳರ ಜೊತೆ ಶಾಮೀಲಾಗಿರುವ ಅಧಿಕಾರಿಗಳಿಗೆ ಸರ್ಜರಿ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು