10:23 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಗುರುಪುರ ಕರಾವಳಿ ಜೋಡುಕರೆ ಕಂಬಳ ಉತ್ಸವದ ಲೋಗೋ ಬಿಡುಗಡೆ

17/12/2023, 11:52

ಮಂಗಳೂರು(reporterkarnataka.com): ಗುರುಪುರ ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಗುರುಪುರ ಕಂಬಳ ಉತ್ಸವದ ಲಾಂಛನ ಬಿಡುಗಡೆ ಸಮಾರಂಭ ನಗರದ ಬಿಜೈನಲ್ಲಿರುವ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ನಡೆಯಿತು.

ಕಂಬಳ ಸಮಿತಿಯ ಗೌರವಾಧ್ಯಕ್ಷ ಇನಾಯತ್ ಆಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು,
ಕಂಬಳದ ಮೂಲಕ ತುಳುನಾಡಿನ ಸಂಸ್ಕೃತಿ ಎಲ್ಲಡೆ ಪಸರಿಸಲಿ ಎಂದು ಶುಭ ಹಾರೈಸಿದರು.
ಸುರೇಂದ್ರ ಕಂಬಳಿ ಮಾತನಾಡಿ, ತುಳುನಾಡಿನ ಸಾಂಪ್ರದಾಯಿಕ ಆಚರಣೆಯ ಸಂಕೇತವಾಗಿ ಬಂದ ಕಂಬಳದ ಮೂಲಕ ಇನ್ನಷ್ಟು ವಿಸ್ತರಣೆಯಾಗಲಿ ಎಂದರು.
ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ (ರಿ) ಗುರುಪುರ ಇದರ ಅಧ್ಯಕ್ಷ ರಾಜ್ ಕುಮಾರ್ ಶೆಟ್ಟಿ ತಿರುವೈಲ್ ಗುತ್ತು ಅವರು ಸ್ವಾಗತ ಹಾಗೂ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ,ಅಂತಾರಾಷ್ಟ್ರೀಯ ಕಾರ್ ರೇಸ್ ಪಟು ಅಶ್ವಿನಿ ನಾಯ್ಕ್ , ಉಮೇಶ್ ರೈ ಪದವು ಮೇಗಿನ ಮನೆ, ಮಾಜಿ ಜಿ.ಪಂ ಸದಸ್ಯ ಯು.ಪಿ.ಇಬ್ರಾಹಿಂ, ಗಡಿಕಾರ ಪ್ರಮೋದ್ ರೈ, ಕರಾವಳಿ ಜೋಡುಕರೆ ಕಂಬಳ ಗುರುಪುರ ಸದಸ್ಯರಾದ ಹರೀಶ್ ಭಂಡಾರಿ, ವಿನಯ ಕುಮಾರ್ ಶೆಟ್ಟಿ, ಯಶವಂತ ಶೆಟ್ಟಿ, ಪುರುಷೋತ್ತಮ, ಜಗದೀಶ್ ಆಳ್ವ, ಗಿರೀಶ್ ಆಳ್ವ, ಸುನಿಲ್ ಗಂಜಿಮಠ, ಸುಧಾಕರ, ಗುರುಪುರ ಗ್ರಾಮ ಪಂಚಾಯತ್ ಸದಸ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು
ವಿಜೇತ್ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು