4:47 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಬ್ರ್ಯಾಂಡ್ ಮಂಗಳೂರು ವಾಕಥಾನ್; ಜನತೆಯ ಸಹಭಾಗಿತ್ವದಲ್ಲಿ ಸಮೃದ್ಧ ಮಂಗಳೂರು: ಮೇಯರ್ ಸುಧೀರ್ ಶೆಟ್ಟಿ ಆಶಯ

17/12/2023, 18:16

ಮಂಗಳೂರು(reporterkarnataka.com): ಸ್ವಚ್ಛತೆ ಹಾಗೂ ಸೌಹಾರ್ದತೆ ನಗರದ ಅಭಿವೃದ್ದಿಗೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅವಶ್ಯವಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಅಂಗವಾಗಿ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತ ರ ಸಂಘದ ವತಿಯಿಂದ ಭಾನುವಾರ ಆಯೋಜಿಸಲಾದ ಬ್ರ್ಯಾಂಡ್ ಮಂಗಳೂರು ವಾಕಥಾನ್ ಗೆ ನಗರದ ಕುದ್ಮುಲ್ ರಂಗರಾವ್ ಪುರಭವನದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಸಮೃದ್ಧ ಮಂಗಳೂರು ಸಾಕಾರಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.


ದ.ಕ.ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಂಗಳೂರು ವಿಶ್ವ ವಿದ್ಯಾನಿಲಯ ದ ಎನ್ ಎಸ್‌ ಎಸ್ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ, ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಇಂಜಿನಿಯರ್ ಚಂದ್ರಶೇಖರಯ್ಯ ಕೆ.ಟಿ., ಮಂಗಳೂರು ಸ್ಮಾರ್ಟ್ ಸಿಟಿ ಮಹಾಪ್ರಬಂಧಕ ಅರುಣ್ ಪ್ರಭಾ,ಗ್ರಾಮೀಣ ವಿಕಾಸ ಯೋಜನೆಯ ನೋಡಲ್ ಅಧಿಕಾರಿ ತುಕಾರಾಮ ಗೌಡ,ಎನ್ ಎಸ್ ಎಸ್ ಸೈಂಟ್ ಆಗ್ನೆಸ್ ಕಾಲೇಜಿನ ಯೋಜನಾಧಿಕಾರಿ ಉದಯ ಕುಮಾರ್, ಕೆನರಾ ಕಾಲೇಜಿನ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಕೀರ್ತನಾ ಭಟ್, ಬೆಸೆಂಟ್ ಕಾಲೇಜಿನ ಯೋಜನಾಧಿಕಾರಿ ರವಿ ಪ್ರಭ,ಜಿಲ್ಲಾ ಪತ್ರ ಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಸದಸ್ಯ ರೇಮಂಡ್ ತಾಕೊಡೆ, ರೆಡ್ ಕ್ರಾಸ್ ನಿರ್ದೇಶಕ
ರವೀಂದ್ರನಾಥ ಉಚ್ಚಿಲ್, ವಿಭಾ ನಾಯಕ್ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.



ದ.ಕ.ಜಿಲ್ಲಾಡಳಿತ, ಮಂಗಳೂರು ಮಹಾ ನಗರ ಪಾಲಿಕೆ, ಮಂಗಳೂರು ಸ್ಮಾರ್ಟ್ ಸಿಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ, ಪೊಲೀಸ್ ಆಯುಕ್ತರ ಕಾರ್ಯಾಲಯ, ಮಂಗಳೂರು ವಿ.ವಿ.ಎನ್ ಎಸ್ ಎಸ್ ಘಟಕದ ಸಹಭಾಗಿತ್ವದಲ್ಲಿ ವಾಕಥಾನ್ ನಡೆಯಿತು. ನಗರದ ಮೈದಾನ್ ರಸ್ತೆ- ಸ್ಟೇಟ್ ಬ್ಯಾಂಕ್- ಹಂಪನಕಟ್ಟೆ ರಸ್ತೆ ಮೂಲಕ ಸಾಗಿ ಬಂದ ವಾಕಥಾನ್ ನಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು