7:45 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರು: ಕೆಪಿಎಸ್ ಸಿ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಬೇಜವಾಬ್ದಾರಿತನ; ಅಭ್ಯರ್ಥಿ ಗಳ ತಪಾಸಣೆಗೆ ವಿದ್ಯಾರ್ಥಿಗಳ ನೇಮಕ

17/12/2023, 20:05

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಇದು ನಡೆದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳನ್ನು ನೇಮಿಸಿದ ಆಘಾತಕ್ಕಾರಿ ಘಟನೆ ನಡೆದಿದೆ.

ನಗರದ ಬಲ್ಮಠ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾಡಲಾದ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳನ್ನು ಬಳಸಲಾಗಿತ್ತು. ವಿದ್ಯಾರ್ಥಿಗಳ ಕೈಗೆ ಮೆಟಲ್ ಡಿಟೆಕ್ಟರ್ ಕೊಟ್ಟು ಅಭ್ಯರ್ಥಿಗಳ ತಪಾಸಣೆ ಮಾಡಿಸಲಾಗಿತ್ತು. ಇದೀಗ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿ ಗಳ ತಪಾಸಣೆಗೆ ವಿದ್ಯಾರ್ಥಿಗಳ ಬಳಸಿಕೊಂಡ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಲೆಕ್ಕಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರ ಹುದ್ದೆಗೆ ಪರೀಕ್ಷೆ ಮಂಗಳೂರಿನ ಬಲ್ಮಠ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಇಂದು ನಡೆಯಿತು. ಈ ಸಂದರ್ಭ ಅಧಿಕಾರಿಗಳ ಬೇಜವಾಬ್ದಾರಿ ಕ್ರಮ ಬೆಳಕಿಗೆ ಬಂದಿದೆ. ಈ ಕುರಿತು ವೀಡಿಯೊ ವೈರಲ್ ಆಗುತ್ತಿದೆ. ಇದರಲ್ಲಿ ವಿದ್ಯಾರ್ಥಿ ಗಳು ಮೆಟಲ್ ಡಿಟೆಕ್ಟರ್ ಹಿಡಿದು ಪರೀಕ್ಷಾರ್ಥಿಗಳನ್ನು ತಪಾಸಣೆ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸರಿಯಾಗಿ ತಪಾಸಣೆ ನಡೆಸದೇ ಪರೀಕ್ಷಾ ಕೇಂದ್ರ ಪ್ರವೇಶಿಸುತ್ತಿರುವ ಅಭ್ಯರ್ಥಿಗಳ ವಿಡಿಯೋ ಹರಿದಾಡುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು