3:50 PM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪಿ ಬಂಧನ

17/12/2023, 22:04

ಮಂಗಳೂರು(reporterkarnataka.com): ನಗರದ ಕಂಕನಾಡಿ ಬಳಿ ಖೋಟಾ ನೋಟುಗಳನ್ನು ವಶದಲ್ಲಿರಿಸಿಕೊಂಡು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ಮಂಜೇಶ್ವರದ ಪ್ರಶ್ವಿತ್(25) ಎಂಬಾತನ್ನು ಬಂಧಿಸಿದ್ದಾರೆ.
ಈತನಿಂದ 500 ರೂಪಾಯಿ ಮುಖಬೆಲೆಯ, 200 ರೂಪಾಯಿ ಮುಖಬೆಲೆಯ ಮತ್ತು 100 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂಗಳ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುತ್ತಾನೆ. ಆರೋಪಿತನಿಂದ ನಕಲಿ ನೋಟುಗಳಾದ 500 ರೂ ಮುಖಬೆಲೆಯ 3 ನೋಟುಗಳು, 200 ರೂ ಮುಖಬೆಲೆಯ 2 ನೋಟುಗಳು ಹಾಗೂ 100 ರೂ ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ಅವರ ನೇತೃತ್ವದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು