4:48 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕ್ಯಾ. ಪ್ರಾಂಜಲ್ ಗೌರವಾರ್ಥ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024′ ಕ್ರಿಕೆಟ್ ಪಂದ್ಯಾಟ

18/12/2023, 00:03

ಮಂಗಳೂರು(reporterkarnataka.com):ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಜ.5 ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ (ಪೆವಿಲಿಯನ್ )‌ಸ್ಮರಣೆ ಯೊಂದಿಗೆ ನಡೆಯಲಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸುದ್ದಿ ಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳ 25 ಕ್ಕೂ ಅಧಿಕ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಲಿವೆ.
ಪಂದ್ಯಾಟದ ಲಾಂಛನವನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಳಗಾವಿಯಲ್ಲಿ ಅನಾವರಣ ಗೊಳಿಸಿದ್ದಾರೆ.
ಜ.5ರಂದು ಸಂಜೆ 5.30 ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲು, ಎಸ್ ಸಿಡಿಸಿಸಿ ಅಧ್ಯಕ್ಷ ಡಾ ಎಂ.ಎನ್. ರಾಜೇಂದ್ರ ಕುಮಾರ್, ರೋಹನ್ ಕಾರ್ಪೊರೇಶನ್ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಮತ್ತಿತರರು ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಕ್ರೀಡಾ ಸಚಿವ ನಾಗೇಂದ್ರ,ವಸತಿ ಸಚಿವ ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಭಾಗವಹಿಸಲಿದ್ದಾರೆ. ಮಾಜಿ ಸಚಿವ ಅಭಯಚಂದ್ರ ಜೈನ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರುವರು ಎಂದು ಶಿವಾನಂದ ತಗಡೂರು ತಿಳಿಸಿದ್ದಾರೆ.
‌ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ,ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ‌ ಮತ್ತು ರವೀಂದ್ರ ಶೆಟ್ಟಿ ,ಪುಷ್ಪರಾಜ್ ಬಿ.ಎನ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು