11:28 AM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣ: ನಾಪತ್ತೆಯಾಗಿದ್ದ ಸಾಕು ಮಗಳು, ಆಕೆಯ ಸ್ನೇಹಿತ ಸಹಿತ 5 ಮಂದಿ ಬಂಧನ

18/12/2023, 18:13

ಉಡುಪಿ(reporterkarnataka.com): ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಾಕು ಮಗಳು, ಆಕೆಯ ಸೇಹಿತ ಸಹಿತ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕೇರಳದ
ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20) ಮತ್ತು ನಾಪತ್ತೆಯಾಗಲು ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂಬವರನ್ನೂ ಕೂಡ ದಸ್ತಗಿರಿ ಮಾಡಲಾಗಿದೆ.
ಲೀಲಾಧರ ಶೆಟ್ಟಿ ಅವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದ್ದರು. ಡಿಸೆಂಬರ್ 11ರಂದು ಆಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ನೊಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್. ಶೆಟ್ಟಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ನಡುವೆ ಬಂಧಿತ ಆರೋಪಿ ಗಿರೀಶ್ ವಿರುದ್ದ ಪೊಕ್ಸೊ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೊಕ್ಸೊ ಪ್ರಕರಣವನ್ನು ದಾಖಲಿಸಲಾಗಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು