11:09 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನಿಡ್ಡೋಡಿ ಚರ್ಚಿನಲ್ಲಿ ಸೌಹಾರ್ದ ಕ್ರಿಸ್ಮಸ್ 2023 ಆಚರಣೆ: ಲೆರೊಯ್ ಪಿಂಟೊ, ಪದ್ಮಶ್ರೀ ಭಟ್ ಸಹಿತ ಸಾಧಕರಿಗೆ ಸನ್ಮಾನ

20/12/2023, 12:47

ಕಟೀಲು(reporterkarnataka.com):ನಿಡ್ಡೋಡಿ ಸಂತ ತೆರಜಮ್ಮ ದೇವಾಲಯ ಕಲ್ಲಮುಂಡ್ಕೂರುನಲ್ಲಿ ಚರ್ಚ್ ಪಾಲಾನ ಸಮಿತಿ, ಅಂತರ್ ಧರ್ಮಿಯ ಸಂವಾದ ಮತ್ತು ಯುವ ಆಯೋಗದ ಜಂಟಿ ಆಶ್ರಯದಲ್ಲಿ ಸರ್ವ ಧರ್ಮಿಯರ ಜೊತೆಗೂಡಿ ಭಾನುವಾರ ಸಂಜೆ 4 ಗಂಟೆಯಿಂದ ಚರ್ಚಿನ ಆವರಣದಲ್ಲಿ ಸೌಹಾರ್ದ ಕ್ರಿಸ್ಮಸ್ 2023 ನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅತಿಥಿಗಳಾಗಿ ಮಾಜಿ ಶಾಸಕರು ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ಮೂಡುಬಿದಿರೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರೊನಾಲ್ಡ್ ಸಿಲ್ವನ್ ಡಿಸೋಜ, ಕಲಾವಿದ ಸದಾಶಿವ ಪೂಜಾರಿ, ಅರದಿರಲಿ ಬದುಕು ಆರಾಧನಾ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್, ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಲೆರೊಯ್ ಪಿಂಟೊ ಅವರನ್ನು ಸನ್ಮಾನಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ.ಡೇನಿಸ್ ಸುವಾರಿಸ್ ಸ್ವಾಗತಿಸಿದರು, ಕಾರ್ಯದರ್ಶಿ ಜೀವನ್ ಕ್ರಾಸ್ತಾ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು. ಉಪಾಧ್ಯಕ್ಷರಾದ ಜೆಸಿಂತಾ ಡಿಸೋಜ ವಂದಿಸಿದರು. ರೇಶ್ಮಾ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಜೋನ್ ಕಾರ್ಡೋಜ, ಭಗಿನಿ ಸಿಸ್ಟರ್ ಸೆವ್ರಿನ್ ಫೆರ್ನಾಂಡಿಸ್, ಕಿಶೋರ್ ಡಿಸೋಜ ಇನ್ನಿತರರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಕ್ರಿಸ್ಮಸ್ ಕ್ಯಾರಲ್ಸ್ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸರ್ವರಿಗೂ ಕ್ರಿಸ್ಮಸ್ ತಿನಿಸುಗಳನ್ನು ಹಂಚಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು