7:17 PM Sunday1 - November 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.…

ಇತ್ತೀಚಿನ ಸುದ್ದಿ

ಮೂಡಿಗೆರೆ ಸಮೀಪ ಟ್ರಾಕ್ಟರ್ – ಕಾರು ಅಪಘಾತ: ಗಾಯಾಳು ಯುವಕ ಸಾವು

22/12/2023, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterKarnataka@gmail.com

ಟ್ರಾಕ್ಟರ್ ಮತ್ತು ಕಾರು ನಡುವಿನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ.
ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿತ್ತು. ಮಾರುತಿ 800 ಕಾರು ಮತ್ತು ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿ  ಕಾರು ಚಾಲನೆ ಮಾಡುತ್ತಿದ್ದ ಕೀರ್ತಿ ಎಂಬ ಯುವಕನ ಸ್ಥಿತಿ ಗಂಭೀರವಾಗಿತ್ತು.
ಗಾಯಗೊಂಡ ಚಾಲಕನಿಗೆ ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ನಂತರ ಮೃತದೇಹವನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ತಂದು ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಮೃತ ಕೀರ್ತಿ(21) ಬೇಲೂರು ತಾಲ್ಲೂಕು ಚೀಕನಹಳ್ಳಿ ಗ್ರಾಮದವರು. ಚೀಕನಹಳ್ಳಿ ಗ್ರಾಮದ ದಿವಂಗತ ಹಾಲಪ್ಪ ಎಂಬುವವರ ಪುತ್ರ. ಮೂಡಿಗೆರೆ ಸಮೀಪದ ಚಿಕ್ಕಳ್ಳ ಎಂಬಲ್ಲಿ ಕಾಫಿ ಎಸ್ಟೇಟ್ ಒಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಗುರುವಾರ ಮಧ್ಯಾಹ್ನ ಚೀಕನಹಳ್ಳಿ ತನ್ನ ಮನೆಯಿಂದ ಚಿಕ್ಕಳ್ಳದ ತೋಟಕ್ಕೆ ಮಾರುತಿ 800 ಕಾರಿನಲ್ಲಿ ತೆರಳುತ್ತಿದ್ದಾಗ ಮೂಡಿಗೆರೆ ಸಮೀಪದ ಮುತ್ತಿಗೆಪುರದಲ್ಲಿ ಎದುರಿನಿಂದ ಬಂದ ಟ್ರಾಕ್ಟರ್ ಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಟ್ರಾಕ್ಟರ್ ಚಿಕ್ಕಮಗಳೂರು ತಾಲ್ಲೂಕು ಹಾಂದಿ ಮೂಲದ ವ್ಯಕ್ತಿಗೆ ಸೇರಿದೆಂದು ತಿಳಿದುಬಂದಿದೆ.
ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೃತ ಕೀರ್ತಿ ತಂದೆ ತಾಯಿ ಇಬ್ಬರು ಮರಣ ಹೊಂದಿದ್ದು, ಓರ್ವ ಸಹೋದರ ಮತ್ತು ಓರ್ವ ಸಹೋದರಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು