10:05 PM Monday23 - December 2024
ಬ್ರೇಕಿಂಗ್ ನ್ಯೂಸ್
ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17-23 ಕರ್ನಾಟಕ ಕ್ರೀಡಾಕೂಟ-2025: ವ್ಯವಸ್ಥಿತವಾಗಿ ನಡೆಸಲು ಸಿಎಂ… ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ: ಹಾಸನದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿ

24/12/2023, 16:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ.
ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಮೊನ್ನೆ ಗುರುವಾರ ಸಂಜೆಯಿಂದ ಸೃಷ್ಟಿ(19) ಎಂಬ ಯುವತಿ ಕಾಣೆಯಾಗಿದ್ದಳು. ಕಾಣೆಯಾಗಿದ್ದ ಯುವತಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಇಂದು ಮುಂಜಾನೆ ಗ್ರಾಮದ ಕುಡಿಯುವ ನೀರು ಯೋಜನೆಯ ಬಾವಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.
ಜಿ.ಹೊಸಳ್ಳಿ ಗ್ರಾಮದ ಕೃಷ್ಣಮೂರ್ತಿ ಎನ್ನುವವರ ಪುತ್ರಿ ಸೃಷ್ಟಿ ಹಾಸನದ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದರು.
ಕಳೆದ ವಾರ ಮನೆಗೆ ಬಂದಿದ್ದ ಸೃಷ್ಟಿ ಡಿಸೆಂಬರ್ 21 ರ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಳು. ಸೃಷ್ಟಿಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಆದರೆ ಪತ್ತೆಯಾಗಿರಲಿಲ್ಲ. ಇಂದು ಭಾನುವಾರ ಮುಂಜಾನೆ ಗ್ರಾಮದ ಕುಡಿಯುವ ನೀರಿನ ಮೋಟರ್ ಅಳವಡಿಸಿರುವ ಬಾವಿಯಲ್ಲಿ ಯುವತಿಯ ಶವ ತೇಲುತ್ತಿರುವುದನ್ನು ವಾಟರ್ ಮ್ಯಾನ್ ಗಮನಿಸಿ ಮಾಹಿತಿ ನೀಡಿದ್ದಾರೆ.  ಗೋಣಿಬೀಡು ಠಾಣೆಯಲ್ಲಿ ದೂರು ದಾಖಲಾಗಿದ್ದು ಶವವನ್ನು ಮೇಲೆತ್ತಲಾಗಿದೆ.


ಸೃಷ್ಟಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸೃಷ್ಟಿ ತಂದೆ ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ ಹಾಸನದ ವುಮೆನ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು