5:52 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ: ಶ್ರೀನಿವಾಸಪುರ ತಾಲೂಕು ಕಚೇರಿಗೆ ಭೇಟಿ; ವಿವಿಧ ವಿಭಾಗಗಳ ಪ್ರಗತಿ ಪರಿಶೀಲನೆ

24/12/2023, 21:33

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರಜಾ ದಿನದಂದು ಫೀಲ್ಡಿಗಿಳಿದು ಇಲ್ಲಿನ ತಾಲ್ಲೂಕು ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ, ವಿವಿಧ ವಿಭಾಗಗಳ ಪ್ರಗತಿ ಪರಿಶೀಲಿಸಿದರು.
ಕಚೇರಿ ಅವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯವಾಗಿ ಚುನಾವಣಾ ಫಾರಂ ಪ್ರೊಸೆಸಿಂಗ್ ಮತ್ತು ಫ್ರೂಟ್ಸ್ ಎಫ್‍ಐಡಿ ಪ್ರಗತಿ ಪರಿಶೀಲನೆ ನಡೆಸಿದರು.
ರೈತರಿಗೆ ಸರ್ಕಾರದ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ಎಫ್‍ಐಡಿ ನೋಂದಣಿ ಕಾರ್ಯ ಚುರುಕುಗೊಳಿಸಬೇಕು. ಕಂದಾಯ ಇಲಾಖೆ ಸಿಬ್ಬಂದಿ, ಕೃಷಿ ಮತ್ತಿತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಫ್ರೂಟ್ಸ್ ಎಫ್‍ಐಡಿ ನೋಂದಣಿ ಗುರಿ ತಲುಪಬೇಕು. ಅದಕ್ಕೆ ಪೂರಕವಾಗಿ ಈ ಯೋಜನೆಯಿಂದ ಆಗುವ ಪ್ರಯೋಜನ ಕುರಿತು ರೈತರಿಗೆ ತಿಳಿಸಬೇಕು ಎಂದು ತಾಕೀತು ಮಾಡಿದರು.


ತಾಲ್ಲೂಕು ಕಚೇರಿ ಆವರಣಕ್ಕೆ ಸಿಮೆಂಟ್ ಹಾಸು ನಿರ್ಮಿಸುವ ಮತ್ತು ಕಚೇರಿ ಮುಂದೆ ರಸ್ತೆ ನಿರ್ಮಿಸುವ ಕಾಮಗಾರಿ ವೀಕ್ಷಿಸಿದರು ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲಿಸಿದರು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ತಾಲ್ಲೂಕಿನ ರೋಣೂರು ಹೋಬಳಿ ವ್ಯಾಪ್ತಿಯ ಕೊಟ್ರಗುಳಿ ಮತ್ತು ದೇವಲಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಫಾರಂ ನಂಬರ್ 6,7,8 ಅರ್ಜಿಗಳು ಮತ್ತು ಎಫ್‍ಐಡಿ ನೋಂದಣಿ ಕುರಿತು ಪರಿಶೀಲಿಸಿದರು.
ತಹಶೀಲ್ದಾರ್ ಜಿ.ಎನ್. ಸುಧೀಂದ್ರ ,
ಪುರಸಭೆಯ ಮುಖ್ಯಅಧಿಕಾರಿ ವೈ ಎನ್ ಸತ್ಯನಾರಾಯಣ , ತಾಲ್ಲೂಕು ಕಚೇರಿ ಮತ್ತು ಪುರಸಭೆಯ ಸಿಬ್ಬಂದಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು