11:20 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ ಸಂಭ್ರಮದ ಕ್ರಿಸ್ಮಸ್ ಆಚರಣೆ: ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ಯಾರೊಲ್ಸ್

26/12/2023, 10:47

ರಮೇಶ್ ದೇವದುರ್ಗ ರಾಯಚೂರು

info.reporterkarnarnataka@gmail.ಕಂ

ಯೇಸುಕ್ರಿಸ್ತರ ಜನ್ಮದಿನವಾದ ಕ್ರಿಸ್‌ಮಸ್ ಹಬ್ಬವನ್ನು ದೇವದುರ್ಗ ತಾಲೂಕಿನಾದ್ಯಂತ ಕ್ರೈಸ್ತರು ಭಕ್ತಿ, ಶ್ರದ್ಧೆ, ಸಂಭ್ರಮದಿಂದ ಆಚರಿಸಿದರು.
ಭಾನುವಾರ ರಾತ್ರಿಯಿಂದಲೇ ತಾಲೂಕಿನ ಎಲ್ಲಾ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್‌ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಮುಖವಾಗಿ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ಸಭಾ ಪಾಲಕರಾದ ರೇ. ರವಿ ಪ್ರಸಾದ್ ಇವರ ನೇತೃತ್ವದಲ್ಲಿ ಕ್ರಿಸ್ಮಸ್ ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಯೇಸುವಿನ ಪ್ರತಿಮೆ ಮುಂದೆ ಭಕ್ತರು ಮೊಂಬತ್ತಿ ಹಿಡಿದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಉಗ್ರಾಣಿಕರಾದ ಯೇಶಪ್ಪ, ನಾಗಬಸಪ್ಪ, ದೇವಪುತ್ರಪ್ಪ, ಎವನಪ್ಪ, ಹನುಮಂತ, ಗಂಗಪ್ಪ, ಶಿಕ್ಷಕರಾದ ಪ್ರಕಾಶ ಹೊನ್ನಟಗಿ, ಶಾಂತಕುಮಾರ ಹೊನ್ನಟಗಿ, ಬಾಬು, ಮಾರೆಪ್ಪ, ಯಲ್ಲಪ್ಪ, ಭೀಮಣ್ಣ, ಬೂದೆಪ್ಪ, ಮಹೇಶ, ದೇವರಾಜ, ಅಬ್ರಾಂ, ಅನಿತಾ, ಮರಿಯಾಳಮ್ಮ, ಆಶಾ ಕಾರ್ಯಕರ್ತೆ ಲಲಿತಮ್ಮ, ಗಂಗಮ್ಮ, ಗೀತಾ, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಅನೇಕು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು