ಇತ್ತೀಚಿನ ಸುದ್ದಿ
ತಾಯಿ ಜತೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವತಿ ಸಾವು: ಚಾಲಕ ಗಾಂಜಾ ವ್ಯಸನಿಯೇ?
29/12/2023, 16:29
ಮಂಗಳೂರು(reporterkarnataka.com): ಬಿ.ಸಿ. ರೋಡು ಸಮೀಪ ತಾಯಿ ಜತೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ.
ಸ್ಥಳೀಯ ನಿವಾಸಿ ಚೈತ್ರಾ (22 ) ಎಂಬವರು ಬಿ.ಸಿ.ರೋಡ್ ಸಮೀಪದ ಪಚ್ಚಿನಡ್ಕ ಎಂಬಲ್ಲಿ ಗುರುವಾರ ರಾತ್ರಿ 9 ಗಂಟೆ ವೇಳೆ
ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಪ್ಟ್ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ಯುವತಿ ಗಂಭೀರವಾಗಿ ಗಾಯಗೊಂಡಿದ್ದರು. ಆಕೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಚೈತ್ರಾ ನಿಧನರಾಗಿದ್ದಾರೆ.
ಕಾರಿನ ಡ್ಯಾಶ್ ಬೋರ್ಡ್ ನಲ್ಲಿ ಗಾಂಜಾ ಪತ್ತೆಯಾಗಿದೆ. ಕಾರು ಚಾಲಕ ಗಾಂಜಾ ವ್ಯಸನಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.