5:50 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಂದೇ ಭಾರತ್ ಎಕ್ಸ್ ಪ್ರೆಸ್ ಬೋಗಿಯೇರಿದ ಸಂಸದ ನಳಿನ್ ಕುಮಾರ್ ಕಟೀಲ್: ಪೂರ್ವ ಸಿದ್ಧತೆ ಪರಿಶೀಲನೆ; ಡಿಆರ್ ಎಂ ಉಪಸ್ಥಿತಿ

29/12/2023, 17:35

ಮಂಗಳೂರು(reporterkarnataka.com): ಮಂಗಳೂರು- ಮಡಗಾಂವ್ ನಡುವೆ ಡಿ.30 ರಂದು ಸಂಚಾರ ಆರಂಭಿಸಲಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ವ್ಯವಸ್ಥೆ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೆಂಟ್ರಲ್ ರೈಲ್ವೆ ನಿಲ್ದಾಣದ ಪಿಟ್ ಲೈನ್ ನಲ್ಲಿ ನಿಲ್ಲಿಸಲಾಗಿರುವ ವಂದೇ ಭಾರತ್ ರೈಲನ್ನೇರಿದ ಸಂಸದರು ಬೋಗಿ ಹಾಗೂ ಸೀಟುಗಳ ಪರಿಶೀಲಿಸಿದರು. ನಂತರ ಸಂಸದರು ಹೊಸದಾಗಿ ನಿರ್ಮಾಣವಾಗಿರುವ 4-5ನೇ ಫ್ಲಾಟ್ ಫಾರ್ಮ್ ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ನಳಿನ್, ಕರಾವಳಿಯ ಎರಡು ನಗರಗಳನ್ನು ಬೆಸೆಯುವ ವಂದೇ ಭಾರತ್ ರೈಲು, ಪ್ರವಾಸೋದ್ಯಮ, ವಾಣಿಜ್ಯ, ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್, ‌ಪಲಕ್ಕಾಡ್ ವಿಭಾಗದ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಜಯಕೃಷ್ಣನ್, ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು