ಇತ್ತೀಚಿನ ಸುದ್ದಿ
ಮುಂಬೈ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಗೆ ಸನ್ಮಾನ
30/12/2023, 17:36
ಮುಂಬಯಿ (reporterkarnataka.com):ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಹಭಾಗಿತ್ವದಲ್ಲಿ ಮುಂಬೈಯ ಅಂದೇರಿಯ ಸ್ಯಾನಿಟರಿ ಪಾರ್ಕ್ ನ ಕ್ಲಬ್ ಹೌಸ್ನಲ್ಲಿ ನಡೆದ ಪತ್ರಕರ್ತರ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಯವರನ್ನು ಕರ್ನಾಟಕ ರಾಜ್ಯ ಕೃಷಿ ಸಚಿವ ಚೆಲುವರಾಯ ಸ್ವಾಮಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು,ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.