7:54 PM Friday4 - July 2025
ಬ್ರೇಕಿಂಗ್ ನ್ಯೂಸ್
ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ

ಇತ್ತೀಚಿನ ಸುದ್ದಿ

ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!!

06/08/2021, 15:19

ಬೆಂಗಳೂರು(reporterkarnataka.com)

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆ ಕುರಿತ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ.

ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದರು.


ಇತ್ತೀಚಿನ ಸುದ್ದಿ

ಜಾಹೀರಾತು