12:27 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಜನವರಿ 14 ಹಾಗೂ 15: ಬಿಕರ್ನಕಟ್ಟೆ ಬಾಲಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

02/01/2024, 19:04

ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆ ಕಾರ್ಮೆಲ್ ಹಿಲ್ ನ ಬಾಲ ಯೇಸುವಿನ ಪುಣ್ಯಕ್ಷೇತ್ರ,ದಲ್ಲಿ ಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2024 ಜನವರಿ 14 ಹಾಗೂ 15ರಂದು ಅದ್ದೂರಿಯಿಂದ ಆಚರಿಸಲಾಗುವುದು.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಬಾಲಯೇಸುವಿನ ಪುಣ್ಯಕ್ಷೇತ್ರ ಗುರುಕುಲದ ಮುಖ್ಯಸ್ಥರಾದ ವಂದನೀಯ ಮೆಲ್ವಿನ್ ಡಿಕುನ್ಹಾ ಈ ವಿಷಯ ತಿಳಿಸಿದರು.
ಜನವರಿ 14ರಂದು ಸಂಜೆ 6.00 ಗಂಟೆಗೆ ಮಹೋತ್ಸವ ಸಂಭ್ರಮದ ಬಲಿಪೂಜೆಯನ್ನು ಜೈಪುರ ಧರ್ಮಕ್ಷೇತ್ರದ ನಿವೃತ್ತ ಧರ್ಮಾಧ್ಯಕ್ಷರಾದ ಅತೀ ವಂದನೀಯ ಒಸ್ವಾಲ್ಡ್ ಜೋಸೆಫ್ ಲೂವಿಸ್ ನೆರವೇರಿಸುವರು. ಅದೇ ದಿನ ಬೆಳಿಗ್ಗೆ 10.30 ಗಂಟೆಗೆ ಸಂತ ಲಾರೆನ್ಸ್ ಮೈನರ್ ಬಾಸಿಲಿಕಾ, ಅತ್ತೂರು-ಕಾರ್ಕಳ ಇದರ ರೆಕ್ಟರ್ ವಂದನೀಯ ಆಲ್ಬನ್ ಡಿಸೋಜಾರವರು ನೆರವೇರಿಸುವರು. ಇದು ಅನಾರೋಗ್ಯದಿಂದ ಬಳಲುವವರಿಗಾಗಿ ಹಾಗೂ ಹಿರಿಯರಿಗಾಗಿ ವಿಶೇಷ ಪ್ರಾರ್ಥನಾ ವಿಧಿಯಾಗಿರುವುದು.
ಜನವರಿ 15ರಂದು ಬೆಳಿಗ್ಗೆ 10.30 ಗಂಟೆಗೆ ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಫ್ರಾನ್ಸಿಸ್ ಸೆರಾವೊ ಬಲಿಪೂಜೆಯನ್ನು ನೆರವೇರಿಸಲಿರುವರು. ಇದು ಮಕ್ಕಳಿಗಾಗಿ ನೆರವೇರಿಸುವ ವಿಶೇಷ ಬಲಿಪೂಜೆಯಾಗಿರುವುದು. ಮಹೋತ್ಸವದ ಸಮಾರೋಪ ಪ್ರಾರ್ಥನಾ ವಿಧಿಯು ಸಂಜೆ 6.00 ಘಂಟೆಗೆ ಕಾರ್ಮೆಲ್ ಸಭೆಯ ಸಹಾಯಕ ಪ್ರಾಂತ್ಯಾಧಿಕಾರಿಯಾದ ಅತೀ ವಂದನೀಯ ಆರ್ಚಿಬಾಲ್ಡ್ ಗೊನ್ಸಾಲ್ವಿಸ್ ಅವರು ನೆರವೇರಿಸಲಿರುವರು.
ಜನವರಿ 14ರಂದು ಜರಗುವ ಇತರ ಬಲಿಪೂಜೆಗಳ ವೇಳಾಪಟ್ಟಿ ಹೀಗಿದೆ:
ಬೆಳಿಗ್ಗೆ 6.00 (ಕೊಂಕಣಿ), 7.30 (ಇಂಗ್ಲಿಶ್), 9.00 (ಕೊಂಕಣಿ), 1.00 (ಕನ್ನಡ). ಅದೇ ದಿನ 10.30 ಘಂಟೆಗೆ ಅನಾರೋಗ್ಯದಿಂದ ಬಳಲುವವರಿಗಾಗಿ ವಿಶೇಷ ಬಲಿಪೂಜೆ ಕೊಂಕಣಿಯಲ್ಲಿ ನೆರವೇರಲಿರುವುದು.
ವಾರ್ಷಿಕ ಹಬ್ಬದ ಎರಡನೆಯ ದಿನ – ಜನವರಿ 15 ರಂದು ಬೆಳಿಗ್ಗೆ 6.30, 7.30, 9.00 ಘಂಟೆಗೆ ಕೊಂಕಣಿಯಲ್ಲಿ, 10.30ಗೆ ಮಕ್ಕಳಿಗಾಗಿ ವಿಶೇಷ ಪೂಜೆ ಹಾಗೂ 1.00 ಘಂಟೆಗೆ ಮಲಯಾಳಂ ಭಾಷೆಯಲ್ಲಿ ಪೂಜೆಯು ನೆರವೇರಲಿರುವುದು.


ಒಂಬತ್ತು ದಿನಗಳ ನೊವೇನಾ ಪ್ರಾರ್ಥನೆ:
ಈ ಎರಡು ದಿನಗಳ ವಾರ್ಷಿಕ ಮಹೋತ್ಸವಕ್ಕಾಗಿ ನವದಿನಗಳ ಸಿದ್ಧತೆ – ನೊವೇನಾ ಪ್ರಾರ್ಥನೆಯು ಜನವರಿ 5 ರಿಂದ ಜನವರಿ 13 ರ ವರೆಗೆ ನಡೆಯುವುದು. ಆ ದಿನಗಳಲ್ಲಿ ಪ್ರತಿದಿನ 9 ಬಲಿಪೂಜೆಗಳು ನಡೆಯುವುವು. ಬೆಳಿಗ್ಗೆ 6.00, 7.30, 9.00, 10.30 ಹಾಗೂ ಮಧ್ಯಾಹ್ನ 1.00 ಘಂಟೆಗೆ ಕೊಂಕಣಿ ಭಾಷೆಯಲ್ಲಿ, ಸಂಜೆ 4.00 ಘಂಟೆಗೆ ಮಲಯಾಳಂ, 5.00 ಘಂಟೆಗೆ ಇಂಗ್ಲಿಶ್ ಹಾಗೂ 7.30 ಘಂಟೆಗೆ ಕನ್ನಡದಲ್ಲಿ ಬಲಿಪೂಜೆಯು ನಡೆಯಲಿರುವುದು. ಈ ಒಂಬತ್ತು ದಿನಗಳ ಪ್ರಮುಖ ಬಲಿಪೂಜೆಯು ಸಂಜೆ 6.00 ಘಂಟೆಗೆ ಪುಣ್ಯಕ್ಷೇತ್ರದ ಮೈದಾನದಲ್ಲಿ ನಡೆಯಲಿರುವುದು.
ಕ್ರಿಸ್ತ ಪ್ರಸಾದದ ಆರಾಧನೆ: ಪ್ರತಿ ನೋವೆನಾ ದಿನಗಳಲ್ಲಿ 11.30 ರಿಂದ 12.45 ಘಂಟೆಯ ವರೆಗೆ ನಡೆಯಲಿರುವುದು. ಈ ಸಂದರ್ಭದಲ್ಲಿ ವಿವಿಧ ಅಗತ್ಯಗಳಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಲಾಗುವುದು.
ಹೊರೆಕಾಣಿಕೆ: ಮಹೋತ್ಸವದ ಅಂಗವಾಗಿ ಹೊರೆಕಾಣಿಕೆಯು ಜನವರಿ 4 ರಂದು ಸಂಜೆ 4.30 ಘಂಟೆಗೆ ಕುಲಶೇಖರದ ಹೋಲಿಕ್ರಾಸ್ ಚರ್ಚಿನಿಂದ ಆರಂಭಗೊಳ್ಳುವುದು. ಹೊರೆಕಾಣಿಯ ಅಂತಿಮಭಾಗದಲ್ಲಿ ಸರ್ವಧರ್ಮ ಪ್ರಾರ್ಥನಾಕೂಟ ಹಾಗೂ ಧ್ವಜಾರೋಹಣ ಪುಣ್ಯಕ್ಷೇತ್ರದ ಅಂಗಳದಲ್ಲಿ ನಡೆಯುವುದು.
ಅನ್ನಸಂತರ್ಪಣೆ: ನೊವೇನಾ ಹಾಗೂ ಹಬ್ಬದ ದಿನಗಳಲ್ಲಿ (ಜನವರಿ 5 ರಿಂದ 15ರ ವರೆಗೆ) ಪ್ರತೀ ಮಧ್ಯಾಹ್ನ ಭಕ್ತರಿಗೆ ಅನ್ನ ಸಂತರ್ಪಣೆಯು ನಡೆಯುವುದು.
ರಕ್ತದಾನ ಶಿಬಿರ: ಜನವರಿ 11 ಮತ್ತು 12 ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ಘಂಟೆಯ ವರೆಗೆ ರಕ್ತದಾನ ಶಿಬಿರವನ್ನು ಕೂಡಾ ಏರ್ಪಡಿಸಲಾಗಿದೆ.
ಪ್ರತಿಕಾಗೋಷ್ಠಿಯಲ್ಲಿ ವಂದನೀಯ ಸ್ವೀಫನ್ ಪಿರೇರಾ (ನಿರ್ದೇಶಕರು, ಬಾಲಯೇಸುವಿನ ಪುಣ್ಯಕ್ಷೇತ್ರ), ವಂದನೀಯ ದೀಪ್ ಫೆರ್ನಾಂಡೀಸ್, (ಪ್ರಾಂತೀಯ ಪ್ರತಿನಿಧಿ, ಕಾರ್ಮೆಲ್ ಸಭೆ),
ಸ್ಟ್ಯಾನ್ಲಿ ಬಂಟ್ವಾಳ್, (ಮಾಧ್ಯಮ ಪ್ರತಿನಿಧಿ ಬಾಲಯೇಸುವಿನ ಪುಣ್ಯಕ್ಷೇತ್ರ),
ವಂದನೀಯ ಸ್ಟೀಫನ್ ಪಿರೇರಾ, (ನಿರ್ದೇಶಕರು, ಬಾಲಯೇಸುವಿನ ಪುಣ್ಯಕ್ಷೇತ್ರ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು