ಇತ್ತೀಚಿನ ಸುದ್ದಿ
ಗುರುಪುರ ಕೈಕಂಬದ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ ಪಲ್ಟಿ: 5ಕ್ಕೂ ಹೆಚ್ಚು ಮಂದಿಗೆ ಗಾಯ
02/01/2024, 21:28
ಮಂಗಳೂರು(reporterkarnataka.com): ನಗರದ ಹೊರವಲಯದ ಗುರುಪುರ ಕೈಕಂಬ ಸಮೀಪದ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಮಂಗಳವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ನವದುರ್ಗಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡಕ್ಕೀಡಾಗಿದೆ. ಬಸ್ಸಿನಲ್ಲಿ 40ರಿಂದ 50 ರಷ್ಟು ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪೊಳಲಿ ದ್ವಾರದ ಬಳಿಯ ಸುಮಾರು 100 ಮೀ ಸಾಗುವಾಗಲೇ ಈ ಅವಘಡ ಸಂಭವಿಸಿದೆ. ಬಸ್ಸು ಕೈಕಂಬದಿಂದ ಬಿ. ಸಿ. ರೋಡ್ ಕಡೆಗೆ ತೆರಳುತ್ತಿತ್ತು.