ಇತ್ತೀಚಿನ ಸುದ್ದಿ
ಸರಕಾರಿ ಆಸ್ಪತ್ರೆಯ ಸಿಬ್ಬಂದಿ ಮೇಲೆ ವಕೀಲರಿಂದ ಹಲ್ಲೆ ಆರೋಪ: ವೈದ್ಯ ಸಿಬ್ಬಂದಿಗಳಿಂದ ಪ್ರತಿಭಟನೆ: ಆರೋಪಿ ಬಂಧನಕ್ಕೆ ಆಗ್ರಹ
03/01/2024, 19:00

ಬೆಳಗಾವಿ(reporterkarnataka.com):ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ
ಅಥಣಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ಆಸ್ಪತ್ರೆ ಸಿಬ್ಬಂದಿಗಳು ಇಂದು ಮುಂಜಾನೆಯಿಂದ ಪ್ರತಿಭಟನೆ ನಡೆಸಲಾರಂಭಿಸಿದರು. ತಡರಾತ್ರಿ ಆಸ್ಪತ್ರೆ ಸಿಬ್ಬಂದಿ ಬಸವರಾಜ ಘೂಳಪ್ಪನ್ನವರ ಎಂಬುವರ ಮೇಲೆ ಹಲ್ಲೆ ನಡೆಸಲಾಗಿತ್ತು.
ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ ಎಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ವಕೀಲ ದಯಾನಂದ್ ವಾಘ್ಮೋರೆ ಎಂಬುವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಖಂಡಿಸಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಪ್ರತಿಭಟನೆ ನಡೆಸಿದ್ದಾರೆ.
ಆರೋಪಿಯನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಹಲ್ಲೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.