9:13 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಹಿಂದೂಗಳನ್ನು ದುರ್ಬಲಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ಥಾನ ನಿರ್ಮಾಣ: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು

04/01/2024, 10:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಿಂದೂಗಳನ್ನು ದುರ್ಬಲ ಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ರಾನ ನಿರ್ಮಾಣಕ್ಕೆ ಕಾರಣವಾಗುತ್ತದೆ ಎಂದು ಮಾಜಿ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರ. ಒಂದು ಕಾಲದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಖಂಡ ಭಾರತದ ಭಾಗವಾಗಿತ್ತು. ಅಲ್ಲಿ ನೂರಕ್ಕೆ ನೂರು ಹಿಂದೂಗಳಿದ್ದರು, ಗಾಂಧಾರಿಯ ತವರು ಮನೆ ಆಫ್ಘಾನಿಸ್ತಾನ ಆಗಿತ್ತು ಎಂದರು.
ಭಾರತದಲ್ಲಿ ಹಿಂದೂಗಳು ಕಡಿಮೆ ಆದಾಗ ಅದು ಮೊಗಲ್ ಸ್ಥಾನ ಅಥವಾ ಪಾಕಿಸ್ಥಾನ ಆಗುತ್ತದೆ. ಹಿಂದೂಗಳನ್ನು ಒಡೆದಾಳುವ ನೀತಿ ಆಫ್ಘಾನಿಸ್ತಾನ, ನಿರ್ಮಾಣಕ್ಕೆ ಕಾರಣವಾಗುತ್ತೆ. ಹಿಂದೂಗಳು ಒಗ್ಗಟ್ಟಾಗಿದ್ದರೆ ಪಾಕಿಸ್ಥಾನ ಅನ್ನೋ, ವಿಚಾರವೇ ತಲೆ ಎತ್ತುವುದಿಲ್ಲ ಎಂದು ಅವರು ಹೇಳಿದರು.
ಕಾಂಗ್ರೆಸ್ ನದ್ದು ಎಸ್.ಡಿ.ಪಿ.ಐ, ಪಿ ಎಫ್.ಐ ಬೆಂಬಲಿಸುವ ನೀತಿ. ಪಾಕಿಸ್ಥಾನ ನಿರ್ಮಾಣಕ್ಕೆ ಕಾರಣವಾಗುತ್ತೀರಿ. ನೀವು ಮತ್ತು ನಿಮ್ಮ ಮಕ್ಕಳು ಸುರಕ್ಷಿತವಾಗಿ ಇರಬೇಕಾದರೆ, ಕಾಂಗ್ರೆಸ್ ಕೆಟ್ಟ ನೀತಿ ಮಾಡಬಾರದು. ಹಿಂದೂ ಬಹು ಸಂಖ್ಯಾತನಾಗಿದ್ದರೆ, ಭಾರತ, ಸಂವಿಧಾನ ಉಳಿಯುತ್ತೆ. ಹಿಂದೂ ಅಲ್ಪ ಸಂಖ್ಯಾತನಾದರೆ ಭಾರತ, ಸಂವಿಧಾನ ಉಳಿಯುವುದಿಲ್ಲ. ಹಿಂದೂ ರಾಷ್ಟ್ರವಾದರೆ ಆಫ್ಘಾನಿಸ್ತಾನ ಆಗಲು ಜಾಗವೇ ಇರಲ್ಲ. ನಿಮ್ಮ ಮನಸ್ಸಿನಿಂದ ತಾಲಿಬಾನ್ ಚಿಂತನೆ ತೆಗೆದು ಹಾಕಿ ಎಂದು ಸಿ.ಟಿ.ರವಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು