4:17 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಲಿ: ಕೆಯುಡಬ್ಲ್ಯೂಜೆ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌ ಗೆ ಚಾಲನೆ ನೀಡಿ ಸ್ಪೀಕರ್ ಯು.ಟಿ. ಖಾದರ್

05/01/2024, 23:28

ಮಂಗಳೂರು(reporterkarnataka.com):ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು.ಈ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ
ಯು.ಟಿ.ಖಾದರ್‌ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವೀರ ಯೋಧ ದಿ.ಕ್ಯಾಪ್ಟನ್‌ ಎಂ.ವಿ.ಪ್ರಾಂಜಲ್‌ ಗೌರವಾರ್ಥ ಮಂಗಳೂರುಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಮೂರು ದಿನಗಳ ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024 ಕ್ರಿಕೆಟ್‌ ಪಂದ್ಯಾವಳಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ.


ಬ್ರ್ಯಾಂಡ್‌ ಮಂಗಳೂರು ಸ್ಲೋಗನ್‌ ಮೂಲಕ ಇಲ್ಲಿನ ಪತ್ರಕರ್ತರು ಕರಾವಳಿಯ ರಾಯಭಾರಿಗಳಾಗಿದ್ದಾರೆ. ಪತ್ರಕರ್ತರ ಸಂಘಗಳ ಅನ್ಯೋನ್ಯ ಚಟುವಟಿಕೆಗಳಿಗೆ ಎಲ್ಲರಿಗೂ ಮಾದರಿಯಾಗಿದ್ದು, ಇದು ಸಾಮಾಜಿಕ ಹಿತಾಸಕ್ತಿಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು
ಅವರು ಶ್ಲಾಘಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌.ರಾಜೇಂದ್ರ ದೀಪ ಪ್ರಜ್ವಲನಗೊಳಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಸಂಸದ ನಳಿನ್‌ ಕುಮಾರ್‌ ಕಟೀಲ್‌ ಟ್ರೋಫಿ ಅನಾವರಣಗೊಳಿಸಿದರು. ಮಂಗಳೂರು ದಕ್ಷಿಣ ಶಾಸಕ
ವೇದವ್ಯಾಸ್‌ ಕಾಮತ್‌ ಅವರು ಪ್ರದರ್ಶನ ಪಂದ್ಯ ಉದ್ಘಾಟಿಸಿದರು. ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಬ್ರ್ಯಾಂಡ್‌ ಮಂಗಳೂರು ಫಲಕ ಅನಾವರಣಗೊಳಿಸಿದರು.
ರೋಹನ್‌ ಕಾರ್ಪೊರೇಷನ್‌ ಆಡಳಿತ ನಿರ್ದೇಶಕ ರೋಹನ್‌ ಮೊಂತೆರೋ ಅವರು ಕ್ರೀಡಾ ಸಂಚಿಕೆ ಅನಾವರಣಗೊಳಿಸಿದರು. ಮೆರವಣಿಗೆಗೆ ಮಾಜಿ ಸಚಿವ ಅಭಯಚಂದ್ರ ಜೈನ್‌ ಚಾಲನೆ ನೀಡಿದರು.
ಎಂಆರ್‌ಜಿ ಗ್ರೂಪ್‌ ಚೇರ್‌ಮೆನ್‌ ಪ್ರಕಾಶ್‌ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದರು. ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಅವರು ಕಾರ್ಟೂನ್‌ ಪ್ರದರ್ಶನ
ಉದ್ಘಾಟಿಸಿದರು. ಮಂಗಳೂರಿನ ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಪಥ ಸಂಚಲನಕ್ಕೆ ಚಾಲನೆ ನೀಡಿದರು. ಐಎಫ್‌ಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ
ಮದನ್‌ ಗೌಡ ಅವರು ಕ್ಯಾಪ್‌ ಹಸ್ತಾಂತರಿಸಿದರು.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಕೆಐಒಸಿಎಲ್‌ ಅಧ್ಯಕ್ಷ ಸಾಮಿನಾಥನ್‌, ದ.ಕ. ಬಸ್‌ ಮಾಲೀಕರ ಸಂಘದ ಮಾಜಿ ಅಧ್ಯಕ್ಷ
ದಿಲ್‌ರಾಜ್‌ ಆಳ್ವ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ ಸಿ ಲೋಕೇಶ, ರಾಜ್ಯ ಕಾರ್ಯ ಸಮಿತಿ ಸದಸ್ಯರಾದ ಬಾಳ ಜಗನ್ನಾಥ ಶೆಟ್ಟಿ, ಇಬ್ರಾಹಿಂ ಅಡ್ಕಸ್ಥಳ, ಪತ್ರಿಕಾ ಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್‌., ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌,ಕ್ರೀಡಾಕೂಟ ಸಂಚಾಲಕ ಅನ್ನು ಮಂಗಳೂರು ಇದ್ದರು.
ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.
ಪತ್ರಕರ್ತರ ಸಂಘದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ. ಬಿ. ಹರೀಶ್ ರೈ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು