9:32 PM Thursday16 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು: 1992ರ ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಸನ್ಮಾನ

06/01/2024, 19:36

ಮಂಗಳೂರು(reporterkarnataka.com):ನಮೋ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಸನ್ಮಾನಿಸಲಾಯಿತು. ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಮಂದಿ ಕರಸೇವಕರನ್ನು ಸನ್ಮಾನಿಸಿ ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ ಡಾಕ್ಯುಮೆಂಟರಿಯನ್ನು ಎಲ್ ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು. ಆ ಬಳಿಕ ನಮೋ ಬ್ರಿಗೇಡ್ ರಾಜ್ಯ ಮಾರ್ಗದರ್ಶಕರಾದ ಚಕ್ರವರ್ತಿ ಸೂಲಿಬೆಲೆಯವರು ಕರಸೇವಕರ ಹೋರಾಟಗಳ ಘಟನಾವಳಿಗಳು, ತ್ಯಾಗ, ಬಲಿದಾನಗಳ ಕುರಿತು ಮಾತನಾಡಿದ ವಿಡಿಯೋ ಪ್ರದರ್ಶಿಸಲಾಯಿತು. ಸನ್ಮಾನ ಸ್ವೀಕರಿಸಿದ ಕರಸೇವಕರು ಮೆಚ್ಚುಗೆಯನ್ನು ಸೂಚಿಸಿದರು. ವಿಶ್ವ ಹಿಂದೂ ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಹಿರಿಯ ಲೇಖಕ ಡಾ. ಪಿ. ಅನಂತಕೃಷ್ಣ ಭಟ್, ವಿಹಿಂಪ ಮುಖಂಡರಾದ ಶರಣ್ ಪಂಪ್ ವೆಲ್, ಶಿವಾನಂದ ಮೆಂಡನ್, ಮಟ್ಟಾರು ವಿಠಲ್ ಕಿಣಿ ಸಹಿತ ಅನೇಕ ಗಣ್ಯರು ಭಾಗವಹಿಸಿದರು. ನಮೋ ಬ್ರಿಗೇಡ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ತಿಲಕ್ ಶಿಶಿಲ, ಭರತ್ ನಾಗರಮಠ್, ರಾಜೇಂದ್ರ ಉಳ್ಳಾಲ್, ನರೇಶ್ ಪ್ರಭು, ಸಿರ್ಧಾರ್ಥ್ ಪ್ರಭು, ನಾಗೇಂದ್ರ ಶೆಣೈ ಸಹಿತ ನಮೋ ಬ್ರಿಗೇಡ್ ಪ್ರಮುಖರು ಉಪಸ್ಥಿತರಿದ್ದರು. ಗೋಪಾಲಕೃಷ್ಣ ಭಟ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು