1:04 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಭೀಮಾ ಕೋರೆಗಾಂವ್ ವಿಜಯೋತ್ಸವ: ಬೃಹತ್ ಸಮಾವೇಶ; ನಟ ಚೇತನ್ ಭಾಗಿ

07/01/2024, 21:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ನಂಜನಗೂಡು ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಸ್ವಾಭಿಮಾನದ ನಡಿಗೆ ಪ್ರಬುದ್ಧ ಭಾರತದ ಕಡೆಗೆ ಎಂಬ ಸಮಾವೇಶವನ್ನು ನಟ ಚೇತನ್ ಅಹಿಂಸ ಉದ್ಘಾಟಿಸಿದರು.
ಇದಕ್ಕೂ ಮುನ್ನ ನಂಜನಗೂಡಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಜಾಗೃತಿ ರಥಕ್ಕೆ ಪ್ರಗತಿಪರ ಚಿಂತಕ ಮಹೇಶ್ ಚಂದ್ರ ಗುರು ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.


ನಂಜನಗೂಡಿನ ಆರ್. ಪಿ. ರಸ್ತೆಯ ಮೂಲಕ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದವು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.
ಬಳಿಕ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ದಿವಂಗತ ಬಸವಲಿಂಗಪ್ಪ ವೇದಿಕೆಯಲ್ಲಿ ಬುದ್ಧ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಟ ಚೇತನ್ ಅಹಿಂಸ ಪುಷ್ಪಾರ್ಚನೆ ಮಾಡುವ ಮೂಲಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾನತೆ ಪರಿವರ್ತನೆ ನಮ್ಮ ಸಿದ್ಧಾಂತವಾಗಬೇಕು. ಅನ್ಯಾಯದ ಪರವಾಗಿ ನಿಂತರೆ, ಸತ್ಯ ಹೇಳಲು ನಮ್ಮಲ್ಲಿ ಧೈರ್ಯ ಇರಬೇಕಿದೆ. ನ್ಯಾಯದ ವಿರುದ್ಧ ಮಾತನಾಡಿದರೆ ಸತ್ಯ ಹೇಳಿದರೆ ನಮಗೆ ಜೀವ ಬೆದರಿಕೆ ಹಾಕುತ್ತಾರೆ. ಸುಳ್ಳು ದೂರುಗಳನ್ನು ನೀಡುತ್ತಾರೆ.
ನಾವು ಧೈರ್ಯವಾಗಿ ಎದುರಿಸಲು ಸಿದ್ಧರಾಗಬೇಕು. ಅಂಬೇಡ್ಕರ್ ಅವರ ಮಾರ್ಗವನ್ನು ಅನುಸರಿಸಬೇಕು. ನಾವು ಪರಿವರ್ತನೆಯಾಗಬೇಕು ಸಮಾನತೆಯನ್ನು ಪ್ರತಿಪಾದಿಸಬೇಕು.
ನಾವು ಸತ್ಯ ಹೇಳಿ ಜೈಲಿಗೆ ಹೋಗಿದ್ದೇವೆ ಹೊರತು ಸುಳ್ಳು ಹೇಳಿ ಅಲ್ಲ. ಭೀಮ ಕೋರೆಂಗಾವ್ ಯುದ್ಧ ನಡೆದು ತುಂಬಾ ವರ್ಷಗಳೇ ಆಗಿದೆ. ನಮ್ಮ ಹಿರಿಯರು ಮಾಡಿದ ಹೋರಾಟ ಇನ್ನೂ ಕೂಡ ಜೀವಂತವಾಗಿದೆ.
ಸಮಾನತೆಗಾಗಿ ನಡೆದ ಹೋರಾಟವೆಂದರೆ ಅದು ಭೀಮ ಕೋರೆಂಗಾವ್ ವಿಜಯೋತ್ಸವ ಎಂದು ಹೇಳಿದರು.
ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಭಿನಾಗಭೂಷನ್, ದಸಂಸ ಸಂಚಾಲಕರಾದ ಮಲ್ಲಹಳ್ಳಿ ನಾರಾಯಣ್, ಚುಂಚನಹಳ್ಳಿ ಮಲ್ಲೇಶ್, ವಿಜಯಕುಮಾರ್, ಕಾರ್ಯ ಬಸವಣ್ಣ, ಶಂಕರಪುರ ಸುರೇಶ್, ಪ್ರಶಾಂತ್, ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು