8:02 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕರಕುಶಲ ಕರ್ಮಿಗಳಿಗೆ ಪ್ರೊತ್ಸಾಹ: 10 ದಿನಗಳ ಬೆಂಗಳೂರು ಉತ್ಸವಕ್ಕೆ ಚಾಲನೆ; ಬನ್ನಿ, ನೋಡಲು ನೀವೂ ಬನ್ನಿ!

07/08/2021, 08:57

ಬೆಂಗಳೂರು(reporterkarnataka.com); ಕೊರೊನಾ ಲಾಕ್‌ಡೌನ್‌ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಲಾಯಿತು. 


ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಿದ ನಟಿ ಶುಭಾ ಶೆಟ್ಟಿ ಮಾತನಾಡಿ, ಕೊರೊನಾ ಕಾಲದಲ್ಲಿ ಎಲ್ಲರಿಗೂ ಸಂಕಷ್ಟ ಅನುಭವಿಸಿದ್ದಾರೆ. ಅದರಲ್ಲೂ ಕರಕುಶಲಕರ್ಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ತೊಂದರೆಗೀಡಾಗಿದ್ದರು. ಅವರಿಗೆ ಮಾರುಕಟ್ಟೆಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಉತ್ಸವದಲ್ಲಿ ಪಾಲ್ಗೊಂಡು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಿ ಎಂದು ಮನವಿ ಮಾಡಿದರು. 


ಈ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಗಸ್ಟ್‌ 15 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಕರೋನಾ ಸಾಂಕ್ರಾಮಿಕ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 


ಕಾರ್ಯಕ್ರಮದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ.ಎಲ್‌. ಶಂಕರ್‌, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಪ್ರೊ. ಕೆ.ಎಸ್‌. ಅಪ್ಪಾಜಯ್ಯ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು