9:57 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಆಂಬುಲೆನ್ಸ್ ನಲ್ಲೇ ಹೆತ್ತಳಾ ತಾಯಿ!: ಗಂಡು ಮಗುವಿಗೆ ಜನ್ಮ ನೀಡಿದ ಅಸ್ಸಾಂ ಮೂಲದ ಕೂಲಿ ಕಾರ್ಮಿಕೆ

07/01/2024, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತುಂಬು ಗರ್ಭಿಣಿಯೋರ್ವಳು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.
ಸುಲ್ತಾನ್ ಪರ್ವೀನ್ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಪರ್ವೀನ್ ಸುಲ್ತಾನ್ ಅಸ್ಸಾಂ ಮೂಲದವರು. ಕೂಲಿಗಾಗಿ ಮೂಡಿಗೆರೆ ತಾಲೂಕಿನ ಬಾಳೂರು ಎಸ್ಟೇಟ್ ಗೆ ಆಗಮಿಸಿದ್ದರು. ತೋಟದ ಲೈನ್ ಮನೆಗಳಲ್ಲಿ ವಾಸವಿದ್ದ ಪರ್ವೀನ್ ತುಂಬು ಗರ್ಭೀಣಿಯಾಗಿದ್ದು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕೂಡಲೇ ಆಂಬುಲೆನ್ಸ್ ನಲ್ಲಿ ಆಕೆಯನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪರ್ವೀನ್ ಗೆ ಆಂಬುಲೆನ್ಸ್ ನಲ್ಲೇ ಹೆರಿಗೆಯಾಗಿದೆ. ಆಂಬುಲೆನ್ಸ್ ಚಾಲಕ ಆರೀಫ್ ಹಾಗೂ ಮಹಿಳೆಯ ಸಂಬಂಧಿ ಜೊತೆ ಸೇರಿ ಆಂಬುಲೆನ್ಸ್ ಚಾಲಕ ಆರೀಫ್ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಡೆಲವರಿ ಬಳಿಕ ತಾಯಿ-ಮಗು ಆರೋಗ್ಯವಾಗಿದ್ದು ಹೆರಿಗೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಕಳೆದ 10 ದಿನದಲ್ಲಿ ಇದು ಆಂಬುಲೆನ್ಸ್ ನಲ್ಲಿ ಹೆರಿಗೆಯಾದ ಮೂರನೇ ಪ್ರಕರಣ. ಮೂರರಲ್ಲಿ ಎರಡು ಪ್ರಕರಣದಲ್ಲಿ ಆಂಬುಲೆನ್ಸ್ ಚಾಲಕ ಹಾಗೂ ಗರ್ಭಿಣಿಯ ಜೊತೆಗಿದ್ದವರೇ ಹೆರಿಗೆ ಮಾಡಿಸಿದ್ದಾರೆ. ಆದರೆ, ಸ್ಥಳಿಯರು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಬಳಿ ಎಲ್ಲಾ ಮಾಹಿತಿ ಇರುತ್ತೆ. ಹೆರಿಗೆ ದಿನಾಂಕದ ಮೊದಲು ಅಂಗನವಾಡಿ ಕಾರ್ಯಕರ್ತರ ಮೂಲಕ ಅವರಿಗೆ ಎಚ್ಚರಿಕೆ ಕೊಡಿಸಬಹುದು. ಆದರೆ, ಮಹಿಳೆಯರು ಹೆರಿಗೆ ನೋವು ಬರುವವರೆಗೆ ಮನೆಯಲ್ಲೇ ಇದ್ದರೆ ನಾಳೆ ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು. ಆರೋಗ್ಯ ಅಧಿಕಾರಿಗಳು ಗರ್ಭಿಣಿಯರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು