ಇತ್ತೀಚಿನ ಸುದ್ದಿ
ರಾಷ್ಟ್ರೀಯ ಹೆದ್ದಾರಿ ಸಮಸ್ಯೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನವರಿ 8ರಂದು ಸಭೆ
07/01/2024, 23:02
ಉಡುಪಿ(reporterkarnataka.com): ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 ಎ (ಮಲ್ಪೆ- ಹೆಬ್ರಿ) ಯ ವಿವಿಧ ಸಮಸ್ಯೆಗಳು ಹಾಗೂ ಭೂ ಸ್ವಾಧೀನ ವಿಳಂಬ ಹಾಗೂ ಕಾಮಗಾರಿಗಳ ಪ್ರಗತಿಯ ಬಗ್ಗೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ಜನವರಿ 8 ರಂದು ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಮಲ್ಪೆ ಹೆಬ್ರಿ ರಾಷ್ಟ್ರೀಯ ಹೆದ್ದಾರಿಯ ಭೂ ಸ್ವಾಧೀನ ಪ್ರಕ್ರಿಯೆಯ ವಿಳಂಬ, ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಸಭೆಯಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರ ಕಂಪೆನಿಯ ಪ್ರತಿನಿಧಿಗಳು, ನಗರ ಸಭಾ ಸದಸ್ಯರು ಭಾಗವಹಿಸಲಿದ್ದಾರೆ.