5:06 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಸಮಗ್ರ ಅಭಿವೃದ್ಧಿ ಪಿಎಂ ಜನ್‍ಮನ್ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾಡಳಿತ ಸಜ್ಜು: ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್

08/01/2024, 21:10

ಮಂಗಳೂರು(reporterkarnataka.com): ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರಗ ಸಮುದಾಯದವರು ಬುಡಕಟ್ಟು ಸಮುದಾಯದವರಾಗಿದ್ದು ಎಲ್ಲಾ ಹಂತದ ಸರಕಾರಿ ಯೋಜನೆಗಳನ್ನು ಅವರಿಗೆ ತಲುಪಿಸಲು ಕ್ರಮ ವಹಿಸಲು ಅವರು ಸೂಚಿಸಿದರು.
ಆರೋಗ್ಯ ಕಾರ್ಡ್, ಕಾರ್ಮಿಕ ಕಾರ್ಡ್, ಸೇರಿದಂತೆ ವಿವಿಧ ದಾಖಲೆಗಳನ್ನು ಶ್ರಮವಹಿಸಿ ನೀಡಬೇಕು. ಶಾಲಾ ಬಿಟ್ಟ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆ ಸೇರಿಸಬೇಕು. ಆಶ್ರಮ ಶಾಲೆಗಳ ಫಲಿತಾಂಶವನ್ನು ಸುಧಾರಿಸಬೇಕು. ಅಗತ್ಯವಿದ್ದಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಕೊರಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಕೆಲವೆಡೆ ಮೊಬೈಲ್ ಸಿಗ್ನಲ್ ಗಳು ಇಲ್ಲದಿರುವ ಪ್ರದೇಶಗಳಲ್ಲಿ ಮೊಬೈಲ್ ಟವರ್ ಸ್ಥಾಪಿಸಲು ಕ್ರಮ ಕೈಗೊಳ್ಳಲು ಅವರು ಬಿಎಸ್‍ಎನ್‍ಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್ ಜಿ., ಐಟಿಡಿಪಿ ಅಧಿಕಾರಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು