6:45 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕರ್ಪಣೆಯಿಂದ ಪ್ರತಿ ಗ್ರಾಮದಲ್ಲಿ ಸೌಹಾರ್ದತೆ, ಸೋದರತೆ ಬೆಳೆಯಲಿ: ಸ್ಪೀಕರ್ ಯು.ಟಿ. ಖಾದರ್ ಹಾರೈಕೆ

09/01/2024, 19:52

ಮಂಗಳೂರು(reporterkarnataka.com): ಅಯೋಧ್ಯೆಯಲ್ಲಿ ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿರುವ ಶ್ರೀರಾಮ ಮಂದಿರ ಕಾರ್ಯಕ್ರಮಕ್ಕೆ ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಶುಭ ಹಾರೈಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಭವ್ಯವಾದ ರಾಮ ಮಂದಿರದಿಂದ ನಮ್ಮ ದೇಶಕ್ಕೆ ಕೀರ್ತಿ ಬರುವ ವಿಚಾರ ಆಗಲಿ ಮತ್ತು ನಮ್ಮ ಸಮಾಜದ ಪ್ರತಿ ಗ್ರಾಮದಲ್ಲೂ ಸೌಹಾರ್ದತೆ, ಸೋದರತೆ, ಪ್ರೀತಿ ವಿಶ್ವಾಸ ನೆಲೆಗೊಳ್ಳಲು ಇದೊಂದು ಪ್ರೇರಣೆಯಾಗುವ ಕಾರ್ಯಕ್ರಮ ಆಗಲಿ. ಈ ಕಾರ್ಯಕ್ರಮಕ್ಕೆ ಸಂತೋಷದಿಂದ ನಾನು ಶುಭಾಶಯ ಸಲ್ಲಿಸುತ್ತೇನೆ ಎಂದಿದ್ದಾರೆ.
ಆಹ್ವಾನ ಬಂದ್ರೆ ಉದ್ಘಾಟನೆಗೆ ಹೋಗ್ತೀರಾ ಅನ್ನೊ‌ ಪ್ರಶ್ನೆಗೆ ಸಮಯಾವಕಾಶ, ಅವಕಾಶ ಸಿಕ್ಕಿದಂತಹ ಸಂದರ್ಭದಲ್ಲಿ ಎಲ್ಲರೂ ಕೂಡ ಹೋಗಬಹುದು. ಉದ್ಘಾಟನೆಗೆ ಹೋದರೆ ಅದರಲ್ಲಿ ತಪ್ಪಿಲ್ಲ ಎಂದ ಖಾದರ್ ನಮ್ಮ ಸಮಾಜ ಹಾಗೂ ದೇಶವನ್ನು ಒಗ್ಗಟ್ಟು ಮಾಡುವ ಸಮಾರಂಭ ಆಗಬೇಕು ಅಂತಾ ನಾನು ಹೇಳ ಬಯಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು