12:59 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬೈಲೂರಿನ ಮಂತ್ರಾಕ್ಷತೆ ವಿತರಣೆ ವೀಡಿಯೋ ಹಂಚಿಕೊಂಡ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ: ಎಲ್ಲೆಡೆ ಭಾರೀ ವೈರಲ್

09/01/2024, 20:12

ಕಾರ್ಕಳ(reporterkarnataka.com):ಕಾರ್ಕಳ ತಾಲೂಕಿನ ಎಲ್ಲಡೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ ನಡೆಯುತ್ತಿದ್ದು, ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಮಂತ್ರಾಕ್ಷತೆ ವಿತರಣೆ ವೀಡಿಯೋ ದೇಶದ ಗಮನ ಸೆಳೆದಿದೆ.
ಲವಿನ್ ಕೋಟ್ಯಾನ್ ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಈ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು,ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ರಂಗೊಲಿ ಬಿಡಿಸಿ ಸ್ವಾಗತ: ಬೈಲೂರಿನ ಮನೆ ಮನೆಯಲ್ಲಿ ರಂಗೋಲಿ ಹಾಕಿ, ದೀಪ ಬೆಳಗಿ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತಿದೆ. ಸುಮಾರು ಐವತ್ತಕ್ಕೂ ಹೆಚ್ಚು ರಂಗೋಲಿಗಳನ್ನು ಬಿಡಿಸಿದ್ದು ರಸ್ತೆಗಳಲ್ಲಿ ಭಜನೆ ಮಾಡುತ್ತಾ ಭಕ್ತರು ರಸ್ತೆಯ ಇಕ್ಕೆಲಗಳಲ್ಲಿ ಸಾಗುವ ವೀಡಿಯೋದಲ್ಲಿದೆ.
ವಿನೂತನವಾಗಿ ಮಂತ್ರಾಕ್ಷತೆ ವಿತರಣೆ ಮಾಡಬೇಕೆಂದು ಯೊಜನೆ ರೂಪಿಸಿದ್ದೆವು. ಈ ವೀಡಿಯೋ ಈ ರಾಮ ಜನ್ಮ ಭೂಮಿತೀರ್ಥ ಕ್ಷೇತ್ರತ ನ್ನಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವುದು ಖುಷಿ ತಂದಿದೆ. ಶತಮಾನಗಳ ಕನಸು ನನಸಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಕಾರ್ಯಕ್ರಮ ರೂವಾರಿ ಮಹೇಶ್ ಶೆಣೈ ಬೈಲೂರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು