9:43 AM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಸಂಗೀತ ಮನಸ್ಸಿಗೆ ಮುದ ನೀಡುವ ಕಲಾ ಸಾಧನ: ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ . ಗಣೇಶ್ ಕಾರ್ಣಿಕ್

10/01/2024, 22:40

ಮಂಗಳೂರು(reporterkarnataka.com); ಸಂಗೀತ ಮನಸ್ಸಿಗೆ ಮುದ ನೀಡುವ ಅದ್ಭುತ ಕಲಾ ಸಾಧನ ಎಂದು ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಅವರು ಮಂಗಳವಾರ ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ವತಿಯಿಂದ ನಗರದ ಚಿಲಿಂಬಿ ಶಾರದಾ ಮಹೋತ್ಸವ ಸಮಿತಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಸಂಗೀತ ನಮ್ಮ ತನು ಮತ್ತು ಮನಕ್ಕೆ ವಿಶೇಷವಾದ ಚೇತನವನ್ನು ನೀಡುವ ಶಕ್ತಿಯನ್ನು ಹೊಂದಿದೆ. ಆದ್ದುದರಿಂದ ಅದು ನಮ್ಮ ಪರಂಪರೆಯೊಂದಿಗೆ ಬೆಳೆದು ಬಂದಿದೆ ಎಂದರು.
ಈ ಸಂದರ್ಭದಲ್ಲಿ ನಡೆದ ಸಂಗೀತ ಸಂಭ್ರಮದಲ್ಲಿ ಹಾರ್ಮೋನಿಯಂನಲ್ಲಿ ಕಲಾವಿದ ತೇಜಸ್ ಕಟೋಟಿ ಹಾಗೂ ತಬಲಾದಲ್ಲಿ ಸುಮಿತ್ ಎಸ್. ನಾಯಕ್ ಸಂಗೀತ ಕಾರ್ಯಕ್ರಮ ನೀಡಿದರು.
ವೇದಿಕೆಯಲ್ಲಿ ಚಿಲಿಂಬಿ ಬಾಲಕರ ಶಾರದೋತ್ಸವ ಸಮಿತಿಯ ಅಧ್ಯಕ್ಷ ಸುಬ್ರಾಯ ನಾಯಕ್, ಶಾರದಾ ಮಹಿಳಾ ಮಂಡಲದ ಅಧ್ಯಕ್ಷೆ ಅಡಿಗೆ ಪದ್ಮಾಶೆಣೈ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್, ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು