7:26 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ

ಇತ್ತೀಚಿನ ಸುದ್ದಿ

ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮ ಪಾಲಿಸಬೇಕು: ಯೇನಪೊಯ ವಿವಿ ಕುಲಪತಿ ಡಾ. ವಿಜಯ ಕುಮಾರ್

11/01/2024, 20:41

ಮಂಗಳೂರು(reporterkarnataka.com): ನಮ್ಮಲ್ಲಿ ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮಗಳನ್ನು ಪಾಲಿಸಬೇಕು. ಜೀವನದಲ್ಲಿ ಇಂತಹ ಶಿಸ್ತು ಪಾಲನೆ ಮಾಡಿದರೆ ಉತ್ತಮ ಸ್ಥಾನಕ್ಕೆ ಏರಲು ಸಾಧ್ಯವಿದೆ ಎಂದು ಯೇನಪೊಯ ವಿಶ್ವವಿದ್ಯಾನಿಲಯದ ಕುಲಪತಿ ಡಾ. ವಿಜಯಕುಮಾರ್ ಹೇಳಿದರು.

ಅವರು ಗುರುವಾರ ಮಂಗಳೂರು ನಗರ ಸಂಚಾರ ಪೊಲೀಸ್ ವಿಭಾಗದ ವತಿಯಿಂದ ಸಾರಿಗೆ ಇಲಾಖೆ – ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸಹಯೋಗದಲ್ಲಿ ಡಾ. ಟಿಎಂಎ ಪೈ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2024 ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ize-medium wp-image-58505″ />
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತೀ ವರ್ಷ ಸಂಚಾರ ಸುರಕ್ಷತಾ ಸಪ್ತಾಹ ಆಯೋಜಿಸಲಾಗುತ್ತಿದೆ. ಅಪಘಾತಗಳ ಸಂಖ್ಯೆ ಕಡಿಮೆ ಆಗಿದೆಯೇ ಎಂದು ನೋಡಿದರೆ ಇಲ್ಲ ಎನ್ನುವ ಉತ್ತರ ದೊರೆಯುತ್ತದೆ. ಕುಟುಂಬಕ್ಕೆ ನೆರವಾಗಬೇಕಾದ ವಯಸ್ಸಿನಲ್ಲಿ ಅಪಘಾತಕ್ಕೆ ಬಲಿಯಾಗುವುದು ನಿಜಕ್ಕೂ ದುರಂತ. ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ದುರಂತಗಳನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯವೂ ಆಗಿದೆ ಎಂದರು.

ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಬಿ.ಪಿ. ದಿನೇಶ್ ಕುಮಾರ್ ಅವರು ಪ್ರಸ್ತಾವಿಕವಾಗಿ ಮಾತನಾಡಿ, ನಗರದಲ್ಲಿ ಪ್ರತಿ ವರ್ಷ ೬೦೦-೮೦೦ ಅಪಘಾತಗಳು ಸಂಭವಿಸುತ್ತಿದ್ದು, ೮೦೦-೯೦೦ ಮಂದಿ ಗಾಯಾಳುಗಳಾದರೆ, ೧೦೦-೧೨೦ ಮಂದಿ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ವಾಹನ ಚಾಲನಾ ಮತ್ತು ರಸ್ತೆ ಬಳಕೆ ನಿಯಮಾವಳಿಗಳನ್ನು ತಿಳಿದುಕೊಳ್ಳಬೇಕಾದ ಅಗತ್ಯವಿದೆ ಎಂದರು.


ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಆರ್‌ಎಂಒ ಡಾ. ಸುಧಾಕರ್, ಸಿಎಆರ್ ಮಂಗಳೂರು ಪೊಲೀಸ್ ಉಪ ಆಯುಕ್ತ ಪಿ. ಉಮೇಶ್, ಸಾರಿಗೆ ಉಪ ಆಯುಕ್ತ ಹಾಗೂ ಹಿರಿಯ ಸಾರಿಗೆ ಅಽಕಾರಿ ಶ್ರೀಧರ್ ಕೆ.ಮಲ್ಲಾಡ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಕಜೆ, ಮಂಗಳೂರು ವಿಶ್ವ ವಿದ್ಯಾನಿಲಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ,ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ, ಸೇವಕಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ಅವರು ರಸ್ತೆ ಸಂಚಾರದ ವೇಳೆ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಕ್ಕಳಿಗೆ ವಿವರಿಸಿದರು. ನಗರದಲ್ಲಿ ಸಂಚಾರ ನಿಯಂತ್ರಣಕ್ಕೆ ಸ್ವಯಂ ಪ್ರೇರಣೆಯಿಂದ ಶ್ರಮಿಸುತ್ತಿರುವ ಟ್ರಾಫಿಕ್ ವಾರ್ಡನ್‌ಗಳಾದ ಫ್ರಾನ್ಸಿಸ್ ಮೊರಾಸ್, ರೋಶನ್ ಸಿಕ್ವೇರಾ, ರಮೇಶ್ ಕಾವೂರು ಅವನ್ನು ಸಮ್ಮಾನಿಸಲಾಯಿತು. ಅತ್ಯುತ್ತಮ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬಂದಿಯವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.



ಮಂಗಳೂರು ದಕ್ಷಿಣ ಸಂಚಾರ ಠಾಣೆ ಇನ್ಸ್ ಪೆಕ್ಟರ್ ರಮೇಶ್ ಹಾನಾಪುರ ಸ್ವಾಗತಿಸಿದರು.


ಆರ್‌ಜೆ ಪ್ರಸನ್ನ ಮತ್ತು ಅಕ್ಷತಾ ಶೆಣೈ ‘ ಕಾರ್ಯಕ್ರಮ ನಿರೂಪಿಸಿದರು. ಇನ್ಸ್‌ಪೆಕ್ಟರ್ ಮೊಹಮ್ಮದ್ ಶರೀಫ್ ಅವರು ವಂದಿಸಿದರು. ಕಮಿಷನರೇಟ್ ವ್ಯಾಪ್ತಿಯ ವಿವಿಧ ಶಾಲೆ – ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು