8:33 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಂಜನಗೂಡು: ರಾಮಜನ್ಮಭೂಮಿ ಅಯೋಧ್ಯೆಯಿಂದ ತಂದ ಮಂತ್ರಾಕ್ಷತೆ ಮನೆ ಮನೆಗೆ ವಿತರಣೆ

12/01/2024, 19:45

ಮೋಹನ್ ನಂಜನಗೂಡು ಮೈಸೂರು

info.reporterkarnatak@gmail.com
ಹಿಂದುಗಳ ಬಹು ನಿರೀಕ್ಷಿತ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಅಂಗವಾಗಿ ಜನವರಿ 22ರಂದು ಶ್ರೀ ಬಾಲರಾಮನ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆಯ ಪ್ರಯುಕ್ತ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ಇಂದು ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಹಾಗೂ ಹರತಲೆ ಗ್ರಾಮಗಳು ಸೇರಿದಂತೆ ವಿವಿಧಡೆ ವಿತರಣೆ ಮಾಡಲಾಯಿತು.


ಹೆಗ್ಗಡಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಹರತಲೆ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿದ ಬಳಿಕ ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಚಾಲನೆ ನೀಡಿದರು. ಪಕ್ಷದ ಹಾಗೂ ಗ್ರಾಮದ ಮುಖಂಡರ ಜತೆಗೂಡಿ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿದರು.
ಮಂತ್ರಾಕ್ಷತೆ ವಿತರಿಸುವ ಸಂದರ್ಭ ಮಹಿಳೆಯರು ಮಂತ್ರಾಕ್ಷತೆಗೆ ದೀಪ ಬೆಳಗಿ ಪೂಜೆ ಸಲ್ಲಿಸಿ ಭಕ್ತಿ ಭಾವದೊಂದಿಗೆ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭ ಮಂತ್ರಾಕ್ಷತೆ ವಿತರಣೆಗೆ ಬಂದ ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರುಗಳಿಗೆ ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ನಂತರ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಂಡಲ ಅಧ್ಯಕ್ಷ ಮಹೇಶ್ ಮಾತನಾಡಿ ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರತಿಷ್ಠಾಪನೆ ಅಂಗವಾಗಿ ಅಲ್ಲಿಂದ ಮಂತ್ರಾಕ್ಷತೆ ಕಳುಹಿಸಿ ಇಡೀ ದೇಶಾದ್ಯಂತ ವಿತರಣೆ ಮಾಡಲಾಗುತ್ತಿದೆ. ಅದರಂತೆ ಇಲ್ಲೂ ಕೂಡ ಯಾವುದೇ ಪಕ್ಷಾತೀತ,ಜಾತ್ಯತೀತ, ಧರ್ಮಾತೀತ ಎನ್ನದೆ ಎಲ್ಲಾ ಭಾರತೀಯರಿಗೂ ಈ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಜಿಪಂ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ತಾಪಂ ಮಾಜಿ ಸದಸ್ಯರುಗಳಾದ ಬಸವರಾಜು, ರವಿ ಗ್ರಾಪಂ ಅಧ್ಯಕ್ಷ ಮನೋಜ್ ಸದಸ್ಯ ಗೋವಿಂದರಾಜ್ ಮುಖಂಡರುಗಳಾದ ಸಂಜಯ್ , ದೊಡ್ಡಂಕಶೆಟ್ಟಿ,ಮಹದೇವಸ್ವಾಮಿ ,ಪುಟ್ಟಸ್ವಾಮಿ, ಮಹೇಶ್ ಬಾಬು, ಪ್ರಕಾಶ್, ಗಂಗಾಧರ್, ಚಂದ್ರು ಸೇರಿದಂತೆ ನೂರಾರು ಕಾರ್ಯಕರ್ತ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು