10:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾಲುಬಾಯಿ ರೋಗ: ಜಾನುವಾರುಗಳ ರಕ್ಷಣೆ ಮಾಡುವಂತೆ ಗೌಳಿಪುರ ಜನ ಆಗ್ರಹ..!; ಪಶು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ

07/08/2021, 17:58

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೊರೊನಾ ಮಹಾಮಾರಿಯ ನಡುವೆ ಜನರಿಗೆ ಮತ್ತೊಂದು ಏಟು ಬಿದ್ದಿದೆ. ಅದೇನೆಂದರೆ ಜಾನುವಾರುಗಳಿಗೆ ಕಾಲುಬಾಯಿ ರೋಗ . ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಗೂಳಿಪೂರದಲ್ಲಿ ಎಮ್ಮೆ ಹಸುಗಳಿಗೆ ಕಾಲುಬಾಯಿ ರೋಗ ಬಂದಿದೆ. ಜಾನುವಾರುಗಳಿ ಕಳೆದ 15 ದಿನಗಳಿಂದ ರೋಗ ಕಾಣಿಸಿಕೊಂಡಿದ್ದು, ಈ ರೋಗ ದಿನೇದಿನೇ  ಹೆಚ್ಚಾಗುತ್ತಿದೆ.ಗೂಳಿಪುರದ ರೈತರು ತಾಲೂಕು ಪಶು ವೈದ್ಯಾಧಿಕಾರಿ ಬಳಿ ತಮ್ಮ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ರಕ್ಷಣೆ ಮಾಡಿ ಎಂದು ಸುಮಾರು 15 ದಿನಗಳಿಂದ ಅಲೆದಾಡುತ್ತಿದ್ದರೂ ಪ್ರಯೋಜನವಾಗಿಲ್ಲ.

ತಾಲೂಕು ಪಶು ವೈದ್ಯಾಧಿಕಾರಿ ನಮ್ಮತ್ರ ಅದರ ಮೆಡಿಸನ್ ಇಲ್ಲ, ಇಂಜೆಕ್ಷನ್ ಗಳಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ಮಾಡುತ್ತಿರುವುದರಿಂದ ರೈತರಲ್ಲಿ ಆತಂಕ ಉಂಟು ಮಾಡಿದೆ. ದಿನೇದಿನೇ ರೋಗ ಹರಡುವ ಆತಂಕ ಎದುರಾಗಿದೆ. ಸೂಕ್ತ ಕಾಲಕ್ಕೆ ಪಶುಗಳಿಗೆ ಕಾಲು ಬಾಯಿ ರೋಗ ಹರಡದಂತೆ ಪಶು ಸಂಗೋಪನಾ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ರೈತರು ಮಾಧ್ಯಮಗಳ ಮೊರೆ ಹೋಗಿದ್ದಾರೆ. ಆದಷ್ಟು ಬೇಗ ಸಂಬಂಧಪಟ್ಟ ಜಿಲ್ಲಾ, ತಾಲೂಕು ಪಶು ವೈದ್ಯಾಧಿಕಾರಿಗಳು  ತಮ್ಮ ಜಾನುವಾರುಗಳನ್ನು ಚಿಕಿತ್ಸೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪಶುಸಂಗೋಪನೆ ನಂಬಿಕೊಂಡಿರುವ ರೈತರಿಗೆ ಇದು ಅವರ ಪ್ರಮುಖ ಆದಾಯದ ಮೂಲವಾಗಿದೆ. ಕಾಲುಬಾಯಿ ರೋಗ ಹೈನೋದ್ಯಮಕ್ಕೆ ಪೆಟ್ಟು ನೀಡುವ ಸಾಧ್ಯತೆ ಹೆಚ್ಚಾಗಿದೆ. ಅದಲ್ಲದೆ ಸುಮಾರು 150 ಹೆಚ್ಚು ಎಮ್ಮೆ ಮತ್ತು ಹಸು, ಕುರಿ, ಮೇಕೆಗಳಲ್ಲಿ ರೋಗ ಕಂಡು ಬಂದಿದೆ. ಇನ್ನಾದರೂ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಎಚ್ಚೆತ್ರುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು