6:57 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮಂಗಳೂರು ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಆಚರಣೆ; ರಂಗಗೀತೆ, ಜಾನಪದ ಗೀತೆ ಗಾಯನ

16/01/2024, 17:23

ಮಂಗಳೂರು(reporterkarnataka com): ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್ ಆಚಾರ್ಯ ಅವರ ನೇತೃತ್ವದಲ್ಲಿ ಯುವ ಕಲಾವಿದರ ತಂಡ ಜಾಗೃತಿ ಗೀತೆಗಳು, ಜಾನಪದ ಗೀತೆ ಮತ್ತು ಲಾವಣಿಗಳ ಮೂಲಕ ವಿಚಾರಣಾಧೀನ ಖೈದಿಗಳ ಮನ ರಂಜಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಾಗೃಹದ ಅಧೀಕ್ಷಕರಾದ ಓಬಳೇಶಪ್ಪ ಅವರು ವಹಿಸಿದರು. ವಿಚಾರಣಾಧೀನ ಖೈದಿಗಳ ಮನದಲ್ಲಿ ಪರಿವರ್ತನೆ ತಂದು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇದೊಂದು ಅಪೂರ್ವ ಕಾರ್ಯಕ್ರಮ ಎಂದು ಓಬಳೇಶಪ್ಪ ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಪ್ರಾಧಿಕಾರದಿಂದ ದೊರೆಯುವ ಕಾನೂನು ನೆರವಿನ ಬಗ್ಗೆ ವಿವರಿಸಿದರು.
ಕೆನರಾ ಹೈಸ್ಕೂಲ್ ಮತ್ತು ಸಂತ ಅಲೋಷಿಯಸ್ ಹೈಸ್ಕೂಲ್‌ನ ವಿದ್ಯಾರ್ಥಿಗಳೂ ರಂಗ ಗೀತೆಗಳು, ಜಾನಪದ ಗೀತೆಗಳನ್ನು ಹಾಡಿ ವಿಚಾರಣಾಧೀನ ಖೈದಿಗಳಲ್ಲಿ ಜಾಗೃತಿ ಮೂಡಿಸಿದರು.
ಹಬ್ಬದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖೈದಿಗಳೂ ಚಪ್ಪಾಳೆ ತಟ್ಟಿ, ಹಾಡಿಗೆ ದನಿಗೂಡಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು