8:08 PM Monday13 - January 2025
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ… ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ 50,000 ಕೋಟಿ ಹೂಡಿಕೆ… ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ… ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಯ ನಿಂದನೆ: ಆರೋಪಿಯ ಬಂಧನ; ಎಫ್ ಐಆರ್ ದಾಖಲು

16/01/2024, 22:03

ಮಂಗಳೂರು(reporterkarnataka.com): ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿ ವಿರುದ್ಧ ಕೆಲವು ಆಕ್ಷೇಪಾರ್ಹ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಒಂದು ವೀಡಿಯೋಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಎಫ್‌ಐಆರ್ ದಾಖಲಿಸಲಾಗಿದೆ.
ಬಂಧಿತ ವ್ಯಕ್ತಿ ಅನಿಲ್ ಕುಮಾರ್ (34 ) ಎಂದು ಗುರುತಿಸಲಾಗಿದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ತಾಲೂಕಿನ ಅಜ್ಜರಣಿ ಗ್ರಾಮದ ಮಂಜಪ್ಪ ಎಂಬವರ ಪುತ್ರನಾದ ಈತ ಪ್ರಸ್ತುತ 12 ವರ್ಷಗಳಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾನೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿರುವ ಅನಿಲ್ ತನ್ನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದನು, ಆದರೆ ಸರ್ವರ್ ಸಮಸ್ಯೆ ಮತ್ತು ಇತರ ಸಮಸ್ಯೆಗಳಿಂದ ಕಳೆದ 3 ತಿಂಗಳಿಂದ ಮಾಡಲು ಸಾಧ್ಯವಾಗಲಿಲ್ಲ. ಇದರಿಂದ ಹತಾಶೆಗೊಂಡ ಅವರು ವಿಡಿಯೋ ಮಾಡಿ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಆತನನ್ನು ರಕ್ಷಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಆರೋಪಿ ವಿರುದ್ಧ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ದೂರು ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು