10:08 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಸೇವೆಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಪ್ರೊಬೆಷನರಿ ಪಿಎಸ್‌ಐ ಕೋವಿಡ್‌ಗೆ ಬಲಿ.!

18/05/2021, 12:36

ಮಂಗಳೂರು(Reporter Karnataka News)

ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗರ್ಭಿಣಿ ಅಧಿಕಾರಿ ಶಾಮಿಲಿ(24) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪೊಲೀಸ್ ಕುಟುಂಬದಲ್ಲಿ ಕಿರಿಯ ಸದಸ್ಯರಾಗಿರುವ ಶಾಮಿಲಿ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರೂ ಕೋವಿಡ್ ನಿಯಮ ಪಾಲಿಸಿ ಪೊಲೀಸರೊಂದಿಗೆ ಸಹಕರಿಸಿ, ಸುರಕ್ಷಿತವಾಗಿರಿ ಎಂದು ಈ ವೇಳೆ ಮನವಿ ಮಾಡಿದ್ದಾರೆ.

24 ವರ್ಷದ ಪ್ರೊಬೆಷನರಿ ಪಿಎಸ್ ಐ ಶಾಮಿಲಿ ಮೂಲತಃ ಕೋಲಾರದವರಾಗಿದ್ದು, ಜನವರಿ 11 ರಂದು ಮಂಗಳೂರು ಎಸ್ ಪಿ ಕಚೇರಿಯಲ್ಲಿ ಸೇವೆ ಆರಂಭಿಸಿದ್ದರು. 7 ತಿಂಗಳ ಗರ್ಭಿಣಿಯಾಗಿದ್ದ ಅವರು, ರಜೆಯಲ್ಲಿ ತಮ್ಮ ಊರು ಕೋಲಾರಕ್ಕೆ ಮರಳಿದ್ದರು.
ಬಳಿಕ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಮೇ 2 ರಂದು ಕೋವಿಡ್ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು.
ಮಂಗಳವಾರ ಮುಂಜಾನೆ 4:30ರ ಹೊತ್ತಿಗೆ ನಿಧನರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು