11:57 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಉಡುಪಿ ಪರ್ಯಾಯ ಮಹೋತ್ಸವಕ್ಕೆ10 ಕೋಟಿ ಬಿಡುಗಡೆಗೆ ಕ್ರಮ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

17/01/2024, 18:29

ಉಡುಪಿ(reporterkarnataka.com): ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರನೀಡುತ್ತಿದ್ದು,ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.
ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ ಅವರು, ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳುತ್ತಿರುವೆ. ಪರ್ಯಾಯ ಮಹೋತ್ಸವಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ವಿವಿಧ ಕಾರಣಗಳಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು