12:43 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಜನವರಿ 19ರಿಂದ 3 ದಿನಗಳ ಕಾಲ ಮಂಗಳೂರು ಲಿಟ್‌ ಫೆಸ್ಟ್‌: 60ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗಿ

17/01/2024, 23:10

ಮಂಗಳೂರು(reporterkarnataka.com): ಮಂಗಳೂರು ಲಿಟ್‌ ಫೆಸ್ಟ್‌ನ 6ನೇ ಆವೃತ್ತಿಯು ಜನವರಿ 19, 20 ಮತ್ತು 21 ರಂದು 3 ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಜರುಗಲಿದೆ.
ಒಟ್ಟು 29 ಅವಧಿಗಳನ್ನು ಪ್ರಸ್ತುತ ಉತ್ಸವವು ಹೊಂದಿದೆ. ಎರಡು ವೇದಿಕೆಗಳು ಮತ್ತು ಹರಟೆ ಕಟ್ಟೆ ಇವುಗಳಲ್ಲಿ 60 ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗವಹಿಸಲಿದ್ದಾರೆ.
ಈ ಬಾರಿಯ ʼThe Idea of Bharath’ ಪ್ರಶಸ್ತಿಗೆ ʼವನಿತಾ ಸೇವಾ ಸಮಾಜʼ, ಧಾರವಾಡ ಈ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ.
19ರಂದು ಸಂಜೆ 5ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾದ ಲಕ್ಷ್ಮೀಶ ತೋಳ್ಪಾಡಿ, ಹೆಸರಾಂತ ಕಲಾವಿದೆ ರಾಧೆ ಜಗ್ಗಿ, ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಸಂಸ್ಥೆ (ಐಸಿಎಸ್ಎಸ್ಆರ್) ಸದಸ್ಯ ಕಾರ್ಯದರ್ಶಿ ಡಾ. ಧನಂಜಯ ಸಿಂಗ್, ರಕ್ಷಣಾ ಸಚಿವರ ಸಲಹೆಗಾರ ಲೆ. ಜ. ವಿನೋದ ಖಂಡಾರೆ, ನಿಟ್ಟೆ ವಿಶ್ವವಿದ್ಯಾಲಯದ ಡಾ. ವಿನಯ್‌ ಹೆಗ್ಡೆ, ಮಿಥಿಕ್‌ ಸೊಸೈಟಿಯ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.
ಹೆಸರಾಂತ ಭರತನಾಟ್ಯ ಕಲಾವಿದೆ ರಾಧೆ ಜಗ್ಗಿ (19 ಸಾಯಂಕಾಲ) ಮತ್ತು ಶಾಸ್ತ್ರೀಯ ಸಂಗೀತ ಕಲಾವಿದರಾದ ಸಂದೀಪ್‌ ನಾರಾಯಣ್‌ (20 ಸಾಯಂಕಾಲ) ಕಾರ್ಯಕ್ರಮ ನಡೆಯಲಿದೆ. ಸಿನಿಮಾ ಪ್ರದರ್ಶನ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಕಾರ್ಕಳದ ವಂದನಾ ರೈ ಅವರಿಂದ ಮಕ್ಕಳಿಗಾಗಿ ʼಚಿಣ್ಣರ ಅಂಗಳʼ ನಡೆಯಲಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಕ್ಲೇ ಮಾಡಲಿಂಗ್‌, ದೇಶೀ ಆಟಗಳು ಸೇರಿದಂತೆ ಲೇಖಕರು ಮತ್ತು ಪ್ರಮುಖರೊಂದಿಗೆ ಸಂವಾದ – (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ.
ಸಾಹಿತ್ಯ ಲೋಕದ ಮೂವರು ಸಾಧಕರು, ಕುವೆಂಪು, ಬೇಂದ್ರೆ ಮತ್ತು ಪಂಜೆ ಮಂಗೇಶರಾಯರ ಕುರಿತು ವಿಶೇಷ ಅವಧಿಗಳು ಜರುಗಲಿವೆ.
ವಾಗ್ಮಿಗಳು, ಸಾಹಿತಿಗಳು, ಸಂಶೋಧಕರು, ವಿಷಯ ಪರಿಣಿತರು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇರಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಭಾರತ್ ಫೌಂಡೇಶನ್ ನ ,ಟ್ರಸ್ಟಿ ಗಳಾದ ಶ್ರಿರಾಜ್ ಗುಡಿ,ಸುನಿಲ್ ಕುಲಕರ್ಣಿ, ಆಯೋಜಕರು ಗಳಾದ ದುರ್ಗಾ ಪ್ರಸಾದ್ ಕಟೀಲ್,ಸುಜಿತ್ ಪ್ರತಾಪ್, ಈಶ್ವರ್ ಶೆಟ್ಟಿ, ದಿಶಾ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು