2:05 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸರಕಾರಿ ಕಟ್ಟಡಗಳ ದಾಖಲೆಗಳನ್ನು ಕ್ರಮಬದ್ಧಗೊಳಿಸಿ: ಪ್ರಗತಿ ಪರಿಶೀಲನಾ ಸಭೆ ಕೋಲಾರ ಜಿಲ್ಲಾಧಿಕಾರಿ ಸಲಹೆ

18/01/2024, 10:37

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com
ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು ಶಾಶ್ವತ ಜ್ಞಾಪಿಕೆಗಳು ಅವುಗಳನ್ನು ಜತನದಿಂದ ಮುಂದಿನ ಪೀಳಿಗೆಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಸರ್ಕಾರವು ಅಂಗನವಾಡಿ ಹಾಗೂ ಶಾಲಾ ಕೊಠಡಿಗಳನ್ನು ಕಟ್ಟಿಸಿ ಕೊಡುತ್ತದೆ. ಆದರೆ ಆ ಕಟ್ಟಡಗಳ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದಿಲ್ಲ. ಜಿಲ್ಲೆಯ ಬಹುಪಾಲು ಶಾಲಾ ಕಟ್ಟಡಗಳಿಗೆ ಖಾತೆ ಮಾಡಿಕೊಡಲಾಗುತ್ತಿದೆ. ಎಲ್ಲ ಶಾಲೆಗಳು ಈ ಪ್ರಯೋಜನ ಪಡೆಯಬೇಕು. ವಿವಾದಗಳಿರುವ ಕಟ್ಟಡಗಳಿಗೆ ಸ್ಥಳೀಯ ಪ್ರಾಧಿಕಾರದಲ್ಲಿ ಶೀಘ್ರವಾಗಿ ಬಗೆಹರಿಸಲು ಈಗಾಗಲೇ ಸಂಬಂದಿಸಿದ ಅಧಿಕಾರಿಗಳಿಗೆ ನಿರ್ದೇಶಸಲಾಗಿದೆ ಎಂದರು.
ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಿಂದ ಸ್ಥಳೀಯ ಶಾಲೆಗಳ ಆವರಣದಲ್ಲಿ ನಡೆಸಲು ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದರು. ಸಮುದಾಯ ಭವನಗಳು ಬಹುತೇಕ ವರ್ಷವಿಡೀ ಖಾಲಿ ಇರುತ್ತವೆ. ಸಮುದಾಯದ ಮುಖಂಡರನ್ನು ಸಂಪರ್ಕಿಸಿ ಆ ಕಟ್ಟಡಗಳಲ್ಲಿಯೂ ಸಹ ಅಂಗನವಾಡಿ ಕೇಂದ್ರಗಳನ್ನು ವರ್ಗಾಯಿಸಬಹುದು. ಎಲ್ಲದಕ್ಕೂ ಇಚ್ಚಾಶಕ್ತಿ ಇರಬೇಕು ಎಂದು ತಿಳಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ 2023-24 ನೇ ಸಾಲಿನಲ್ಲಿ ಒಟ್ಟು 94 ಪ್ರಕರಣಗಳು ದಾಖಲಾಗಿದ್ದು ಅವುಗಳಲ್ಲಿ 78 ಪ್ರಕರಣಗಳು ಇಥ್ಯರ್ಥ ಗೊಂಡಿರುತ್ತವೆ. 16 ಪ್ರಕರಣಗಳು ಬಾಕಿ ಇವೆ.


ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 6 ಸಖಿ ಒನ್ ಸ್ಟಾಪ್ ಸೆಂಟರ್ ಗಳಲ್ಲಿ ಏಪ್ರಿಲ್ ಯಿಂದ ಡಿಸೇಂಬರ್ 2023ರವರೆಗೆ167 ವಿವಿಧ ಬಗೆಯ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ 61 ಪ್ರಕರಣಗಳು ನ್ಯಾಯಾಲಯದಲ್ಲಿವೆ. ಪೊಲೀಸ್ ಠಾಣೆ ಗಳಲ್ಲಿ 7 ಹಾಗೂ ಇಥ್ಯರ್ಥ ಮಾಡಿದ ಪ್ರಕರಣಗಳು 90 ಆಗಿವೆ.
ಮಾಲೂರಿನಲ್ಲಿ ಸ್ಥಾಪಿಸಲಾದ ಸ್ವಾಧಾರಗೃಹ ದಲ್ಲಿ ಪ್ರಸಕ್ತ ಸಾಲಿನಲ್ಲಿ 49 ಮಹಿಳಾ ಮತ್ತು ಮಕ್ಕಳನ್ನು ದಾಖಲು ಮಾಡಿಕೊಳ್ಳಲಾಗಿದೆ.
ಒಟ್ಟು 69 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು 7 ಪ್ರಕರಣಗಳನ್ನು ತಡೆದು ಸಂಬಂಧಿಸಿದ ಠಾಣೆಗಳಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ರಾಷ್ಟ್ರೀಯ ಪೋಷಣೆ ಅಭಿಯಾನದಡಿ ಜಿಲ್ಲೆಯ ಅರ್ಹ ಶೇ 98.8 ಫಲಾನುಭವಿಗಳ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲಾಗಿದೆ.
ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ 91.26 ರಷ್ಟು ಪ್ರಗತಿ ಸಾಧಿಸಲಾಗಿದೆ.
ಎಲ್ಲ ಸಿಡಿಪಿಒಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ಕಾಲೇಜುಗಳಲ್ಲಿ ಮೇಲಿನ ಎಲ್ಲ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸಲು ಸೂಚಿಸಿದರು.
ಬಾಲ್ಯ ವಿವಾಹ ಕಾಯ್ದೆ ಬಗ್ಗೆ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್ ಎಸ್ ಹೊಸಮನಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಂ. ನಾರಾಯಣ ಸ್ವಾಮಿ,ಎಲ್ಲ ಸಿ ಡಿ ಪಿ ಓ ಗಳು, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು