ಇತ್ತೀಚಿನ ಸುದ್ದಿ
ಉಡುಪಿ ಪರ್ಯಾಯ: ನಸುಕಿನ ಜಾವ ಸ್ತಬ್ಧಚಿತ್ರಗಳ ಮೆರವಣಿಗೆ; ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್, ಕೇಂದ್ರ ಸಚಿವೆ ಕರಂದ್ಲಾಜೆ ಭಾಗಿ
18/01/2024, 14:40

ಉಡುಪಿ(reporterkarnataka.com):ಉಡುಪಿಯಲ್ಲಿ ನಡೆಯುತ್ತಿರುವ ಪರ್ಯಾಯ ಮಹೋತ್ಸವದ ಅಂಗವಾಗಿ ಗುರುವಾರ ಬೆಳಗಿನ ಜಾವ 2.30ರಿಂದ ನಡೆದ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಪರ್ಯಾಯ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭಾಗವಹಿಸಿದರು.
ಈ ವೇಳೆ ಪರ್ಯಾಯ ಶ್ರೀ ಕೃಷ್ಣ ಪೂಜಾ ಕೈಂಕರ್ಯ ನೇರವೇರಿಸಲಿರುವ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಯಶ್ಪಾಲ್ ಸುವರ್ಣ, ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಶ್ರೀ ಕೃಷ್ಣನ ಭಕ್ತರು ಉಪಸ್ಥಿತರಿದ್ದರು.