11:58 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಗೇಟ್ ಅವಶೇಷ ಕೊನೆಗೂ ತೆರವು: ಸುಂಕ ಸಂಗ್ರಹ ಸ್ಥಗಿತಗೊಂಡು 1 ವರ್ಷದ ಬಳಿಕ ಕ್ಲಿಯರ್; ಹೋರಾಟ ಸಮಿತಿ ಹರ್ಷ

18/01/2024, 14:46

ಮಂಗಳೂರು(reporterkarnataka.com): ಸತತ 7 ವರ್ಷಗಳ ಹೋರಾಟದ ಫಲವಾಗಿ ವರ್ಷದ ಹಿಂದೆ ಟೋಲ್ ಸಂಗ್ರಹ ಸ್ಥಗಿತ ಗೊಂಡಿದ್ದ ಸುರತ್ಕಲ್ ಟೋಲ್ ಪ್ಲಾಜ಼ಾದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ನಿರುಪಯೋಗಿ ಟೋಲ್ ಬೂತ್ ಗಳ ಸಹಿತ ಟೋಲ್ ಗೇಟ್ ಅವಶೇಷಗಳನ್ನು ಜನಾಗ್ರಹಕ್ಕೆ ಮಣಿದು ಹೆದ್ದಾರಿ ಪ್ರಾಧಿಕಾರ ಕೊನೆಗೂ ತೆರವು ಕಾರ್ಯಾಚರಣೆ ಆರಂಭಿಸಿದೆ. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಈ ಕುರಿತು ಹರ್ಷ ವ್ಯಕ್ತ ಪಡಿಸಿದ್ದು, ಜನತೆಯ ಒಗ್ಗಟ್ಟಿನ ಹೋರಾಟದ ಮುಂದೆ ಯಾವುದೂ ಅಸಾಧ್ಯವಲ್ಲ, ಅವಶೇಷಗಳ ತೆರವು ಮೂಲಕ ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟ ಪೂರ್ಣಗೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.


ಸುರತ್ಕಲ್ ಟೋಲ್ ಗೇಟ್ ತೆರವುಗೊಂಡಿರುವುದು “ಹೋರಾಟ ಸಮಿತಿ” ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳು, ನಾಗರಿಕರು ಸತತ ಏಳು ವರ್ಷಗಳ ಕಾಲ ಸತತವಾಗಿ ನಡೆಸಿದ ಹೋರಾಟದ ಫಲ. ಟೋಲ್ ಸಂಗ್ರಹ ಸ್ಥಗಿತಗೊಂಡು ವರ್ಷ ದಾಟಿದರೂ ಟೋಲ್ ಗೇಟ್ ತೆರವುಗೊಳಿಸದೆ ಅಪಾಯಕಾರಿ ಸ್ಥಿತಿಯಲ್ಲಿ ಉಳಿಸಿದ್ದು ಹಲವು ಅನುಮಾನಗಳಿಗೆ, ಅಸಮಾಧನಗಳಿಗೆ ಕಾರಣವಾಗಿತ್ತು. ಟೋಲ್ ಸಂಗ್ರಹ ಮತ್ತೆ ಪುನರಾರಂಭಗೊಳ್ಳುವ ವದಂತಿಗಳು ಹರಡಿದ್ದವು. ಈ ಹಿನ್ನಲೆಯಲ್ಲಿ ಹೋರಾಟ ಸಮಿತಿಯು ಟೋಲ್ ಸಂಗ್ರಹ ಸ್ಥಗಿತಗೊಂಡ ಪ್ರಥಮ ವಾರ್ಷಿಕ ದಿನದಂದು ಟೋಲ್ ಗೇಟ್ ಮುಂಭಾಗ ಸಂಭ್ರಮಾಚರಣೆ ಸಭೆ ಹಮ್ಮಿಕೊಂಡು ನಿರುಪಯೋಗಿ ಟೋಲ್ ಗೇಟ್ ಅವಶೇಷ ತೆರವುಗೊಳಿಸಲು ಬಲವಾಗಿ ಆಗ್ರಹಿಸಿತ್ತು. ಅಂತಿಮವಾಗಿ ಈಗ ಸುರತ್ಕಲ್ ಟೋಲ್ ಗೇಟ್ ಅವಶೇಷ ತೆರವುಗೊಳ್ಳುತ್ತಿದ್ದು, ಕರಾವಳಿ ಕರ್ನಾಟಕದ ಅಪೂರ್ವ ಹೋರಾಟವೊಂದು ಈ ಮೂಲಕ ಯಶಸ್ವಿಯಾಗಿ ಸಮಾರೋಪಗೊಂಡಂತಾಗಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.
ಹೋರಾಟದ ಕೊನೆಯವರೆಗೂ ಕೈಜೋಡಿಸಿದ ಸಮಾನ ಮನಸ್ಕ ಸಂಘಟನೆಗಳು, ನಾಗರಿಕರಿಗೆ ಧನ್ಯವಾದ ಸಲ್ಲಿಸಿದೆ.
ಇದೇ ಸಂದರ್ಭ, ಸುರತ್ಕಲ್ ನಂತೂರು ಹೆದ್ದಾರಿ ಸಮಸ್ಯೆಗಳು, ಮುಖ್ಯವಾಗಿ ಹೆದ್ದಾರಿ ಗುಂಡಿಗಳನ್ನು ಪೂರ್ತಿ ಮುಚ್ಚುವುದು, ಸರ್ವಿಸ್ ರಸ್ತೆ, ಚರಂಡಿಗಳನ್ನು ನಿರ್ಮಿಸಿ ರಸ್ತೆಯನ್ನು ಸುಸಜ್ಜಿತಗೊಳಿಸುವುದು, ನಂತೂರು, ಕೆಪಿಟಿ ಮೇಲ್ಸೇತುವೆ, ಕೂಳೂರು ಸೇತುವೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮುಂದುವರಿಸುವುದಾಗಿ ಹೋರಾಟ ಸಮಿತಿ ತಿಳಿಸಿದೆ.
ಹಾಗೆಯೆ, ನಂತೂರು, ಮೂಡಬಿದ್ರೆ ನಡುವೆ, ಬಿಸಿ ರೋಡ್, ಗುಂಡ್ಯ ನಡುವೆ, ಬಿಸಿ ರೋಡ್, ಚಾರ್ಮಾಡಿ ನಡುವೆ, ಮಾಣಿ, ಸಂಪಾಜೆ ನಡುವೆ ಒಟ್ಟು ಏಳು ಟೋಲ್ ಗೇಟ್ ಗಳು ನಿರ್ಮಾಣಗೊಳ್ಳುವ ಪ್ರಸ್ಥಾಪ ಕರಾವಳಿಯ ನಾಗರಿಕರಲ್ಲಿ ಭೀತಿಗೆ ಕಾರಣವಾಗಿದೆ. ಈ ಕುರಿತು ಜಿಲ್ಲೆಯ ಸಂಸದರು, ಶಾಸಕರು ಮಧ್ಯ ಪ್ರವೇಶಿಸಬೇಕು, ಟೋಲ್ ಗೇಟ್ ಗಳನ್ನು ಕನಿಷ್ಟ ಮಟ್ಟಕ್ಕಿಳಿಸುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸಬೇಕು, ಹಾಗೆಯೆ ಜನತೆ ಈ ಕುರಿತು ಈಗಲೇ ಧ್ವನಿ ಎತ್ತಬೇಕು ಎಂದು ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ಧಾರೆ.

ಇತ್ತೀಚಿನ ಸುದ್ದಿ

ಜಾಹೀರಾತು