11:20 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

18/01/2024, 23:51

ಮಂಗಳೂರು(reporterkarnataka.com): ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ
ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 12 ರಿಂದ 16ವರೆಗೆ ನಡೆಯಲಿರುವ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನವರಿ13ರಂದು ಶ್ರೀ ದೇವರ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರು ಪುರುಷೋತ್ತಮ ಕುಲಾಲ್ ಕಲ್ಪಾವಿ, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ (ರಿ.) ಮಂಗಳೂರು ಅಧ್ಯಕ್ಷ ಮಯೂರ್ ಉಳ್ಳಾಲ್,ಸೇವಾ ಟ್ರಸ್ಟ್ ಅಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಮೋದರ ಎ., ಸೇವಾ ಸಮಿತಿ ಅಧ್ಯಕ್ಷ ಕೆ.ಸುಂದರ ಕುಲಾಲ್,ಮಾತೃ ಮಂಡಳಿ ಅಧ್ಯಕ್ಷ ಗೀತಾ ಮನೋಜ್,ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರರು ಸುರೇಶ್ ಕುಲಾಲ್,ಮಂಗಳ ದೇವಿ. ಟ್ರಸ್ಟಿನ ಕಾರ್ಯದರ್ಶಿ . ಎಂ.ಪಿ. ಬಂಗೇರ,ಬಂಟ್ವಾಳ ಕುಲಾಲ ಸಂಘದ ಅಧ್ಯಕ್ಷ ರಾಧಾಕೃಷ್ಣ ಕುಲಾಲ್,ಉರ್ವ ಕುಲಾಲ ಸಂಘದ ಅಧ್ಯಕ್ಷ ಆನಂದ ಕುಲಾಲ್ ಊರ್ವ,ಕುಲಾಲ ಸಂಘ ಕುಳಾಯಿಯ ಅಧ್ಯಕ್ಷ ಮೋಹನ್ ಐ. ಮೂಲ್ಯ,ಕ್ಷೇತ್ರದ ವಿಶ್ವಸ್ಥರು ಸದಸ್ಯರು, ಕುಲಾಲರ ಮಾತೃ ಸಂಘ ಪದಾಧಿಕಾರಿಗಳು ಭಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಶ್ರೀ ಕ್ಷೇತ್ರವು ಕಳೆದ ವರ್ಷ ಸಂಪೂರ್ಣ ಜೀರ್ಣದ್ಧಾರಗೊಂಡು ವಿಜೃಂಭಣೆಯಿಂದ ಬ್ರಹ್ಮಕಲಸ ನಡೆದು ಕುಲಾಲ ಸಮಾಜವನ್ನು ಕುಲಾಲ ಸಮಾಜಕ್ಕೆ ಸಮರ್ಪಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು