11:20 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಹೊರನಾಡಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅನ್ನಪೂರ್ಣೇಶ್ವರಿ ದೇವಿಯ ದರ್ಶನ

19/01/2024, 17:10

ಹೊರನಾಡು(reporterkarnataka.com) : ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಇಂದು ಕುಟುಂಬ ಸಮೇತ ಚಿಕ್ಕಮಗಳೂರಿನ ಕಳಸ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಧನ ಪಡೆದರು.

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಸಚಿವರಿಗೆ ಸ್ವಾಗತ ನೀಡಿ ಬರಮಾಡಿಕೊಂಡರು. ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವರು, ಶ್ರೀ ಕ್ಷೇತ್ರದಲ್ಲಿ ಮೊಮ್ಮಗಳಿಗೆ ಅನ್ನಪ್ರಾಶನ ಕೈಂಕರ್ಯ ನಡೆಸಿದರು.
ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಣಿಕ್ ಮಸಣಗಿ, ರಾಜೇಂದ್ರ ಹೆಬ್ಬಾರ್, ಮೊಹಮದ್ ರಫಿಕ್, ವೀರೇಂದ್ರ, ‌ಸುಧಾಕರ್, ಸುಕುರು, ಶಂಸುದ್ದೀನ್, ಹೊರನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ಮಧು ಪ್ರಸಾದ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು