11:57 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೊಲ್ಲಮೊಗ್ರು ಹರಿಹರ ಗ್ರಾಮ ವಾಸ್ತವ್ಯ ಕುರಿತು ಜ‌. 21ರಂದು ಪೂರ್ವಭಾವಿ ಸಭೆ

20/01/2024, 09:49

ಸುಬ್ರಹ್ಮಣ್ಯ(reporterkarnataka.com); ದ.ಕ. ಜಿಲ್ಲೆ ಮತ್ತು ಕೊಡಗು ಜಿಲ್ಲೆ ಗಡಿಭಾಗ ಪುಷ್ಪಗಿರಿ ವನ್ಯಧಾಮದ ತಟದ ಗ್ರಾಮಗಳಾದ ಕೊಲ್ಲಮೊಗ್ರು ಹರಿಹರ ಅವಳಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘ ಮತ್ತು ಸುಬ್ರಹ್ಮಣ್ಯ ಪ್ರಸ್ ಕ್ಲಬ್ ಆಶ್ರಯದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಜಿಲ್ಲಾಡಳಿತ, ತಾಲೂಕು ಆಡಳಿತ ಊರವರ ಸಹಕಾರದಲ್ಲಿ ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.


ಈ ಹಿನ್ನಲೆಯಲ್ಲಿ ಕೊಲ್ಲಮೊಗ್ರು ಹರಿಹರ ಗ್ರಾಮ ಪಂಚಾಯತು ವ್ಯಾಪ್ತಿಯ ಪ್ರಮುಖ ನಾಗರಿಕರ ಪೂರ್ವಭಾವಿ ಸಭೆ ಜ.21 ರಂದು ಕೊಲ್ಲಮೊಗ್ರು ಮಯೂರ ಕಲಾ ಮಂದಿರದಲ್ಲಿ ಬೆಳಗ್ಗೆ 11ಕ್ಕೆ ನಡೆಯಲಿದೆ ಎಂದು ದ.ಕ ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಇಂದ್ರಾಜೆ ತಿಳಿಸಿದ್ದಾರೆ.
ಪಶ್ಚಿಮಘಟ್ಟ ತಪ್ಪಲಿನ ಈ ಪ್ರದೇಶ ಜಿಲ್ಲಾ ಕೇಂದ್ರದಿಂದ ತುತ್ತ ತುದಿಯಲ್ಲಿರುವ ಜನವಸತಿ ಗ್ರಾಮಗಳಾಗಿದ್ದು ಮೂಲಸೌಕರ್ಯಕ್ಕೆ ಸಂಬಂಧಿಸಿ ಗುಡ್ಡಗಾಡು ಈ ಭಾಗವಾದ ಈ ಪರಿಸರದ ಜನರ ನಾನಾ ಸಮಸ್ಯೆಗಳನ್ನು ಸರಕಾರದ ಮಟ್ಟದಲ್ಲಿ ಗಮನ ಸೆಳೆಯುವ ಪ್ರಯತ್ನವಾಗಿ ಪತ್ರಕರ್ತರ ಗ್ರಾಮವಾಸ್ತವ್ಯ ನಡೆಯಲಿದೆ.
ಹಳ್ಳಿಯ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಆಡಳಿತದ ಗಮನ ಸೆಳೆಯುವುದರ ಜೊತೆಗೆ. ಸರಕಾರದ ವಿವಿಧ ಯೋಜನೆ ಸೌಲಭ್ಯಗಳನ್ನು ಹಳ್ಳಿ ಜನರಿಗೆ ಪರಿಚಯಿಸಿ ಮಾಹಿತಿ ನೀಡುವ ಸಲುವಾಗಿಯೂ ಗ್ರಾಮ ವಾಸ್ತವ್ಯ ವಿಶೇಷತೆ ಪಡೆದಿದೆ. ಪತ್ರಕರ್ತರ ಗ್ರಾಮ ವಾಸ್ತವ್ಯ ಕಲ್ಪನೆ ವಿಶೇಷವಾಗಿದ್ದು ಗ್ರಾಮದ ನಾಗರಿಕರ ಸಹಕಾರದಲ್ಲಿ ಯಶಸ್ವಿಯಾಗಿ ನಡೆಸಲು ಉಭಯ ಗ್ರಾಮ ಪಂಚಾಯತು ವ್ಯಾಪ್ತಿಯ ನಾಗರಿಕರು ಅಂದು ಗರಿಷ್ಠ ಪ್ರಮಾಣದಲ್ಲಿ ಉಪಸ್ಥಿತರಿದ್ದು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಸಚಿವರು, ಶಾಸಕರು ಸಹಿತ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುತ್ತಿದೆ. ಭಾನುವಾರದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ರೂಪುರೇಷೆ ಸಿದ್ದಪಡಿಸಲಾಗುವುದು ಎಂದವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು